ನ್ಯೂಸ್ ನಾಟೌಟ್: ನಟ ದರ್ಶನ್ ನಟನೆಯ‘ಡೆವಿಲ್’ ಸಿನಿಮಾ ಶೂಟಿಂಗ್ ಇಷ್ಟು ದಿನ ಅರ್ಧಕ್ಕೆ ನಿಂತು ಹೋಗಿತ್ತು. ಈಗ ದರ್ಶನ್ ಮತ್ತೆ ಶೂಟಿಂಗ್ ಗೆ ಮರಳುತ್ತಿರುವುದರಿಂದ ಚಿತ್ರೀಕರಣ ಮತ್ತೆ ಆರಂಭಗೊಂಡಿದೆ. ಮೈಸೂರಿನಲ್ಲಿ ನಾಲ್ಕು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಭದ್ರತೆಗಾಗಿ ಚಿತ್ರತಂಡದವರು ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡುತ್ತಿದ್ದಾರೆ ಎನ್ನಲಾಗಿದೆ.
ದರ್ಶನ್ ಕಳೆದ ವರ್ಷ ಜೂನ್ ತಿಂಗಳಲ್ಲಿ ಬಂಧನಕ್ಕೆ ಒಳಗಾದರು. ನಟನ ಬಂಧನವಾದಾಗ ಮೈಸೂರಿನಲ್ಲಿ ಸ್ಥಗಿತಗೊಂಡಿದ್ದ ಶೂಟಿಂಗ್ ಮತ್ತೆ ಮೈಸೂರಿನಲ್ಲೇ ಅರಂಭ ಆಗುತ್ತಿದೆ.
ಮಾರ್ಚ್ 12ರಿಂದ 15ರವರೆಗೆ ಮೈಸೂರಿನಲ್ಲಿ ಶೂಟಿಂಗ್ ಮಾಡಲು ಅನುಮತಿ ಸಿಕ್ಕಿದೆ. ಮಾ.12 ರಿಂದ ಮಾ.14 ರವರೆಗೆ ಸರ್ಕಾರಿ ಅಥಿತಿ ಗೃಹದಲ್ಲಿ ‘ಡೆವಿಲ್’ ತಂಡ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಗ್ ಮಾಡಲಿದೆ.
ಇದನ್ನೂ ಓದಿ:ಪೊಲೀಸರು ತಮ್ಮ ಸ್ವಂತ ವಾಹನದ ಮೇಲೆ ‘ಪೊಲೀಸ್’ ಎಂದು ಬರೆಸುವಂತಿಲ್ಲ ಎಂದ ಗೃಹ ಸಚಿವ..! ಕಾನೂನು ಕ್ರಮದ ಎಚ್ಚರಿಕೆ..!
ಮಾ.15 ರಂದು ಲಲಿತಮಹಲ್ ಪ್ಯಾಲೆಸ್ ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಚಿತ್ರೀಕರಣ ನಡೆಯಲಿದೆ ಎಂದು ವರದಿ ತಿಳಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಚಿತ್ರೀಕರಣಕ್ಕೆ ಅನುಮತಿ ನೀಡಿದ್ದಾರೆ ಎನ್ನಲಾಗಿದೆ. ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ತಂಡದವರು 1.64 ಲಕ್ಷ ರೂಪಾಯಿಯನ್ನು ಪಾವತಿಸಿದೆ ಎನ್ನಲಾಗಿದೆ.