ನ್ಯೂಸ್ ನಾಟೌಟ್ :ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಸ್ಟೂಟಿ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಲ್ಲಿ ಮುಂಡ್ರಪ್ಪಾಡಿ ಯಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಮುಂಡ್ರಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಮತ್ತು ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಸುಧಾಕರ್ ಗುಡಿಗಾರ್ ರವರ ಕಾಲಿಗೆ ಪೆಟ್ಟಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.