ಕರಾವಳಿ

ಉಜಿರೆ: ಸೌಜನ್ಯ ತಾಯಿ, ಸಹೋದರನ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲು, FIR ನಲ್ಲಿ ಏನಿದೆ..?

219

ನ್ಯೂಸ್ ನಾಟೌಟ್: ಧರ್ಮಸ್ಥಳದಲ್ಲಿ ಸೌಜನ್ಯ ತಾಯಿ ಮತ್ತು ತಮ್ಮ ನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾದ ಪ್ರಕರಣ ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಹಲ್ಲೆ ನಡೆಸುವುದಕ್ಕೆ ಮುಂದಾದ ವ್ಯಕ್ತಿಯ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೌಜನ್ಯ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.

ಉಜಿರೆಯಲ್ಲಿ ಧರ್ಮಸ್ಥಳದಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಭಾರಿ ಪ್ರತಿಭಟನೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸೌಜನ್ಯ ತಾಯಿ, ತಮ್ಮ, ಸಹೋದರಿಯರು ನ್ಯಾಯ ಕೇಳುವುದಕ್ಕಾಗಿ ಅಲ್ಲಿನ ಸಭೆಗೆ ತೆರಳುತ್ತಾರೆ. ಆಗ ಅಲ್ಲಿದ್ದ ವ್ಯಕ್ತಿಯೊಬ್ಬ ಸೌಜನ್ಯ ತಾಯಿ ಹಾಗೂ ತಮ್ಮನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾಗಿದ್ದಾನೆ.

ಈ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೇ ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರು ದಾಖಲಾಗಿದೆ.

ಐಪಿಸಿ 1860, 341, 354, 323, 34 ಸೆಕ್ಷನ್ ಗಳಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

See also  ಸುಳ್ಯ:ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮ,ಎಲ್ಲೆಲ್ಲೂ ಮೊಳಗಿದ ರಾಮನಾಮ;ಸಿಹಿ ಹಂಚಿ,ಪಟಾಕಿ ಸಿಡಿಸಿ ಸಂಭ್ರಮಿಸಿದ ರಾಮಭಕ್ತರು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget