ಭಕ್ತಿಭಾವ

ಡಿಸೆಂಬರ್ 3ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

939

ಧರ್ಮಸ್ಥಳ: ಡಿ.3ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ನಡೆಯಲಿದ್ದು, ನವೆಂಬರ್‌ 29ರಿಂದ ಡಿ.4ರವರೆಗೆ ದೀಪೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ನ.29ರಂದು ವಸಂತ ಕಟ್ಟೆ ಉತ್ಸವ, 30ರಂದು ಕೆರೆಕಟ್ಟೆ ಉತ್ಸವ, ಡಿ.1ರಂದು ಲಲಿತೋದ್ಯಾನ ಉತ್ಸವ, ಡಿ.2ರಂದು ಕಂಚಿಮಾರುಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ ನಡೆಯಲಿವೆ. ಡಿ.3ರಂದು ಗೌರಿಮಾರುಕಟ್ಟೆ ಉತ್ಸವ, ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಡಿ.4ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಸಮಾಪನಗೊಳ್ಳಲಿವೆ.

See also  ಕಲ್ಲುಗುಂಡಿ: ಶ್ರೀಮಹಾವಿಷ್ಣುಮೂರ್ತಿ ಮೇಲೇರಿ ಅಗ್ನಿ ಸ್ಪರ್ಶಕ್ಕೆ ಕ್ಷಣಗಣನೆ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget