ಕರಾವಳಿ

ಧರ್ಮಸ್ಥಳದಿಂದ ಸೌತಡ್ಕ ಗಣಪತಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ, ಹಲವರಿಗೆ ಗಾಯ

398

ನ್ಯೂಸ್ ನಾಟೌಟ್: ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಿಟಿ ವಾಹನದ ನಡುವೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಟಿಟಿ ವಾಹನದ ಮುಂಭಾಗ ಜಖಂಗೊಂಡಿದೆ. ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗೆ ಒಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬೆಂಗಳೂರು ಮೂಲದ ಭಕ್ತರ ಕುಟುಂಬವೊಂದು ಟಿಟಿ ವಾಹನದಲ್ಲಿ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ತೆರಳಿತ್ತು. ಇದೇ ವೇಳೆ ಟಿಟಿ ಮುಂದುಗಡೆ ಕುಂದಾಪುರ ಡಿಪೋಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ಬಸ್ ಡ್ರೈವರ್ ಸ್ವಲ್ಪ ಬ್ರೇಕ್ ಹಾಕಿದಾಗ ಹಿಂದಿನಿಂದ ಬರುತ್ತಿದ್ದ ಟಿಟಿ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ದಾಮ್ಲೆಯವರಿಗೆ ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ ಪ್ರದಾನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget