Latest

ಧರ್ಮಸ್ಥಳ ಸ್ನಾನ ಘಟ್ಟದ ಬಳಿ ಅನಾಮಿಕ ವ್ಯಕ್ತಿಯ ಸ್ಥಳ ಮಹಜರು ನಡೆಸಿದ ಎಸ್ಐಟಿ, ಭಾರೀ ಕುತೂಹಲ ಮೂಡಿಸಿದ ಪ್ರಕರಣ

1.1k

ನ್ಯೂಸ್ ನಾಟೌಟ್: ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದ ಅನಾಮಧೇಯ ವ್ಯಕ್ತಿಯನ್ನು ಸ್ಥಳ ಮಹಜರಿಗಾಗಿ ಎಸ್ ಐಟಿ ಅಧಿಕಾರಿಗಳು ಧರ್ಮಸ್ಥಳ ಸ್ನಾನ ಘಟ್ಟದ ಬಳಿ ಕರೆದುಕೊಂಡು ಬಂದಿದ್ದಾರೆ. ಇದೀಗ ಎಲ್ಲರ ಚಿತ್ತ ಅತ್ತವೇ ನೆಟ್ಟಿದ್ದು ಮುಂದೆ ಏನಾಗಬಹುದು ಎಂಬ ಕುತೂಹಲಕ್ಕೆ ಕಾರಣವಾಗಿದೆ.

ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್, ಅನುಚೇತ್ ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು. ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ. ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು.

ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸಲಾಯಿತು. ಕಂದಾಯ ಇಲಾಖೆ, ಸರ್ವೇ ಇಲಾಖೆ, ಐ.ಎಸ್.ಡಿ. (ಅಂತರಿಕ ಭದ್ರತಾ ವಿಭಾಗ), ಎಫ್.ಎಸ್.ಎಲ್. ವಿಭಾಗದ ಸೋಕೋ ಸಿಬ್ಬಂದಿ ಅರಣ್ಯ ಇಲಾಖೆ ತಂಡದ ಜತೆಗೆ ಸಹಕರಿಸಿದೆ.

See also  ಅಮೆರಿಕದ ದೇಗುಲದಲ್ಲಿ ಮೋದಿ ಹೆಸರಲ್ಲಿ ಪೂಜೆ ಮಾಡಿಸಿದ ಅಣ್ಣಾಮಲೈ..! ಅಮೆರಿಕದಲ್ಲಿರುವ ಉಡುಪಿಯ ಶ್ರೀ ಪುತ್ತಿಗೆ ಮಠದ ಶ್ರೀ ಕೃಷ್ಣ ಮಂದಿರಕ್ಕೆ ಭೇಟಿ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget