ನ್ಯೂಸ್ ನಾಟೌಟ್: ಸ್ಯಾಂಡಲ್ ವುಡ್ ಖ್ಯಾತ ನಟ ಧ್ರುವ ಸರ್ಜಾ ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.ಈ ಸಂದರ್ಭ ಪತ್ನಿ ಪ್ರೇರಣಾ ಜೊತೆಗಿದ್ದರು. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನ ಬಳಿಕ ಉಜಿರೆಯ ಸೂರ್ಯ ದೇಗುಲಕ್ಕೂ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ, ಧ್ರುವ ದಂಪತಿಗೆ ದೇವಳದ ವತಿಯಿಂದ ಗೌರವಿಸಲಾಗಿದೆ.
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ರಿಲೀಸ್ ಗೆ ಧ್ರುವ ಎದುರು ನೋಡುತ್ತಿದ್ದು,ಬಹು ನಿರೀಕ್ಷಿತ ಸಿನಿಮಾ ಇದಾಗಿದೆ. ಇತ್ತೀಚೆಗಷ್ಟೇ ಇದರ ಹಾಡೊಂದು ತೆರೆಕಂಡಿದ್ದು, ಭಾರಿ ಹವಾ ಎಬ್ಬಿಸಿತ್ತು.ಈ ಚಿತ್ರದಲ್ಲಿ ನಾಯಕಿಯಾಗಿ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್, ರವಿಚಂದ್ರನ್ ಸೇರಿದಂತೆ ಅನೇಕರು ನಟಿಸಿದ್ದಾರೆ.