ನ್ಯೂಸ್ ನಾಟೌಟ್: ಡೀಸೆಲ್ ದರ ಏರಿಕೆ ಖಂಡಿಸಿ ಏಪ್ರಿಲ್ 14ರ ಮಧ್ಯರಾತ್ರಿಯಿಂದಲೇ ಲಾರಿ ಮಾಲೀಕರ ಸಂಘ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದ ರಾಜ್ಯಾದ್ಯಂತ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದ್ದು, ರಾಜ್ಯಕ್ಕೆ ಬರುವ ಮತ್ತು ಹೊರರಾಜ್ಯಗಳಿಗೆ ತೆರಳುವ ಸರಕು ಸಾಗಣೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ.
ಪ್ರಸ್ತುತ ಡಿಸೇಲ್ ದರ ಹೆಚ್ಚಳ, ರಾಜ್ಯ ಹೆದ್ದಾರಿಗಳಿಗೆ ಟೋಲ್ ಅಳವಡಿಕೆ ಹಣ ವಸೂಲಿ, ಆರ್ ಟಿಓ ಬಾರ್ಡರ್ ಚೆಕ್ ಪೋಸ್ಟ್, FC ಶುಲ್ಕ ಹೆಚ್ಚಿಸಿರುವುದು, ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ನೋ ಎಂಟ್ರಿ, ಚಾಲಕರ ಮೇಲೆ ಹ*ಲ್ಲೆ ಹೀಗೆ ವಿವಿಧ ಬೇಡಿಕೆ ಮತ್ತು ದೂರುಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ತಿಳಿಸಿದ್ದಾರೆ.
ಆಲ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ದೆಹಲಿ, ಸೌಥ್ ಇಂಡಿಯಾ ಮೋಟರ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಕರ್ನಾಟಕ ಗೂಡ್ಸ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್, ಏರ್ ಪೋರ್ಟ್ ಟ್ಯಾಕ್ಸಿ ಅಸೋಸಿಯೇಷನ್, ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಅಸೋಸಿಯೇಷನ್, ಜಲ್ಲಿ ಕಲ್ಲು, ಮರಳು ಲಾರಿ ಅಸೋಸಿಯೇಷನ್, ರಾಜ್ಯ ಪಡಿತರ ಆಹಾರ ಧಾನ್ಯಗಳ ಸಾಗಾಣಿಕೆದಾರರ ಸಂಘ, ಸೌಥ್ ಜೋನ್ ಲಿಪಿಜಿ ಅಸೋಸಿಯೇಷನ್, ಜಲ್ಲಿ, ಮರಳು ಸಾಗಣೆ ವಾಹನಗಳು, ಗ್ಯಾಸ್ ಟ್ಯಾಂಕ್ ಮಾಲೀಕರ ಸಂಘ ಸಹಿತ 69 ಸಂಘಟನೆಗಳು ಮುಷ್ಕರ ಬೆಂಬಲಿಸಿವೆ.
ವಿವಿ ಕಾಲೇಜಿನ ತರಗತಿ ಗೋಡೆಗಳಿಗೆ ಹಸುವಿನ ಸೆಗಣಿ ಲೇಪಿಸಿದ ಪ್ರಾಂಶುಪಾಲೆ..! ವಿಡಿಯೋ ವೈರಲ್
ಅಮೆರಿಕ ಅಧ್ಯಕ್ಷರನ್ನು ಕೊಲ್ಲಲು ಹಣಬೇಕೆಂದು ಹೆತ್ತವರನ್ನೇ ಕೊಂದ ಬಾಲಕ..! ಒಂದು ವಾರಗಳ ಕಾಲ ಹೆಣಗಳ ಜೊತೆ ವಾಸ..!
ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ..! 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಕಲಾವಿದ