ನ್ಯೂಸ್ ನಾಟೌಟ್: ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ (Monalisa Bhosle) ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ʻದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ತನ್ನ ಪಾಡಿಗೆ ತಾನು ಎಂಬಂತೆ ರುದ್ರಾಕ್ಷಿ ಮಾಲೆ ಮಾರಾಟ ಮಾಡುತ್ತಿದ್ದ ವೇಳೆ ಮೊನಾಲಿಸಾ ಭೋಂಸ್ಲೆ ಅವರು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಟ್ರೆಂಡ್ ಆಗಿದ್ದರು. ಅವರ ಫೋಟೊ ಮತ್ತು ವಿಡಿಯೋಗಳು ಎಲ್ಲೆಂದರಲ್ಲಿ ಹರಿದಾಡಿದ್ದವು. ಈ ಬೆನ್ನಲ್ಲೇ ʻದಿ ಡೈರಿ ಆಫ್ ಮಣಿಪುರʼ (The Diary of Manipur) ಸಿನಿಮಾ ನಿರ್ಮಿಸುವುದಾಗಿ ಮಿಶ್ರಾ ಘೋಷಿಸಿದ್ದರು.ಆದರೆ ಮಿಶ್ರಾ ನಿರ್ದೇಶಿಸಿದ ಯಾವುದೇ ಸಿನಿಮಾಗಳು ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ಹಾಗಾಗಿ ಮಿಶ್ರಾ ಅವರು 16 ವರ್ಷದ ಮೊನಾಲಿಸಾ ಅವರ ವೃತ್ತಿಜೀವನವನ್ನು ಹಾಳು ಮಾಡಲು ಮುಂದಾಗಿದ್ದಾರೆʼ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಹೀಗಾಗಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ನನಗೆ ಘನತೆಗೆ ಕಳಂಕ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮಿಶ್ರಾ ಪ್ರತಿದೂರು ದಾಖಲಿಸಿದ್ದಾರೆ ಎಂಬುದಾಗಿ ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮಿಶ್ರಾ ನೀಡಿದ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.