Latestಕರಾವಳಿರಾಜಕೀಯ

ಡೀಸೆಲ್​​ ದರ ಏರಿಕೆ ವಿರೋಧಿಸಿ ಲಾರಿ ಮುಷ್ಕರಕ್ಕೆ ತಯಾರಿ..! ಅಗತ್ಯ ವಸ್ತುಗಳ ಸಾಗಾಟ ದರ ಹೆಚ್ಚಳ ಸಾಧ್ಯತೆ..!

663

ನ್ಯೂಸ್ ನಾಟೌಟ್: ಡೀಸೆಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಲಾರಿ ಮಾಲೀಕರು, ಲಾರಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಸಂಬಂಧ ಶನಿವಾರ(ಎ.05) ಸಭೆ ನಡೆಸಲಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಹಾಗಾಗಿ ನಾಳೆ ಈ ಕುರಿತು ಸಭೆ ನಡೆಸುತ್ತೇವೆ. ದರ ಏರಿಕೆ ಖಂಡಿಸಿ ಮುಂದಿನ ವಾರ ಮುಷ್ಕರಕ್ಕೆ ಕರೆ ನೀಡಲಿದ್ದೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿಆರ್ ಷಣ್ಮುಗಪ್ಪ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಡೀಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ. ಏಪ್ರಿಲ್ 1ರಿಂದಲೇ ದರ ಹೆಚ್ಚಳ ಜಾರಿಗೆ ಬಂದಿದೆ. ದರ ಹೆಚ್ಚಳದ ನಂತರ ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್ ​ಗೆ 91.02 ರೂಪಾಯಿ ಆಗಿದೆ.

ಈಗಾಗಲೇ ರಾಜ್ಯದಲ್ಲಿ ಬಹುತೇಕ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಡೀಸೆಲ್ ಬೆಲೆ ಹೆಚ್ಚಳದಿಂದ ಮತ್ತಷ್ಟು ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಸಾಗಾಟ ದರ ಹೆಚ್ಚಳವಾದಲ್ಲಿ, ಮತ್ತೆ ಬೆಲೆ ಏರಿಕೆಯ ಹೊಡೆತ ಎದುರಿಸಬೇಕಾಗಬಹುದು.

ಇದನ್ನೂ ಓದಿಟ್ರಂಪ್ ಸುಂಕಕ್ಕೆ ಜಾಗತಿಕ ಷೇರು ಮಾರುಕಟ್ಟೆ ಪತನ..! ಕೋವಿಡ್ ಸಾಂಕ್ರಾಮಿಕದ ಕುಸಿತದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡ ಆಘಾತ..!

See also  ಕೋಪದ ಭರದಲ್ಲಿ ಗಂಡನ ನಾಲಗೆಯನ್ನೇ ಕಚ್ಚಿ ತುಂಡು ಮಾಡಿದ ಪತ್ನಿ!ತುಂಡಾದ ನಾಲಗೆ ಬಗ್ಗೆ ವೈದ್ಯರು ಕುಟುಂಬಸ್ಥರಿಗೆ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget