Uncategorized

‘ಮಂಡ್ಯ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ’ ಸಂಸದೆ ಸುಮಲತಾ ಅಂಬರೀಶ್ ಈ ರೀತಿ ಹೇಳಿದ್ಯಾಕೆ?

ನ್ಯೂಸ್ ನಾಟೌಟ್ : ಮಂಡ್ಯ ಕ್ಷೇತ್ರ ಬಿಟ್ಟು ಕದಲೋದಿಲ್ಲ,ಮಂಡ್ಯದಿಂದಲೇ ಸ್ಪರ್ಧೆ ಖಚಿತ ಎಂದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಸಂಸದೆ ಸುಮಲತಾ ಹೇಳಿದ್ದಾರೆ.

ಮೈಸೂರಿನಲ್ಲಿ ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತಂತೆ ಮಾತನಾಡಿದ ಅವರು ‘ಈ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ ಎನ್ನುವ ಪ್ರತಿಕ್ರಿಯೆ ನೀಡಿದ್ದಾರೆ. ಮುಂದೆ ಎಲ್ಲ ವಿಷಯವನ್ನೂ ತಿಳಿಸುತ್ತೇನೆ’ ಎಂದಷ್ಟೇ ಹೇಳಿದರು. ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ ‘ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದೂ ಇಲ್ಲ’ ಎಂದರು.

‘ ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್‌ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

Related posts

ನಾಲ್ಕು ಕಾಲಿನ ಮಗು ಜನನ, ಮತ್ತೊಂದು ಅಚ್ಚರಿಗೆ ಸಾಕ್ಷಿಯಾದ ವೈದ್ಯಲೋಕ

ಮದ್ಯಪ್ರಿಯರಿಗೆ ಭರ್ಜರಿ ಶಾಕ್: ನಾಳೆಯಿಂದ 3 ದಿನಗಳ ಕಾಲ ಎಣ್ಣೆ ಸಿಗಲ್ಲ..!

ಕೊಕ್ಕಡ: KSRTC ಬಸ್ ಗೆ ಗುದ್ದಿದ ಕಾಡಾನೆ, ದ್ವಿಚಕ್ರ ವಾಹನದ ಮೇಲೂ ದಾಳಿ..! ಎರಡೂ ವಾಹನ ಜಖಂ