ಕರಾವಳಿ

2,000 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಟಿಪ್ಪರ್..! ; ಚಾಲಕನಿಗೆ ಗಂಭೀರ ಗಾಯ ,ಟಿಪ್ಪರ್ ಜಖಂ

240

ನ್ಯೂಸ್ ನಾಟೌಟ್‌: ಚಿಕ್ಕಮಂಗಳೂರಿನ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿಯೊಂದು ಪ್ರಪಾತಕ್ಕೆ ಬಿದ್ದಿರುವ ಘಟನೆ ಬಗ್ಗೆ ವರದಿಯಾಗಿದೆ.ಸುಮಾರು 2000 ಅಡಿ ಪ್ರಪಾತಕ್ಕೆ ಟಿಪ್ಪರ್‌ ಲಾರಿ ಬಿದ್ದಿದೆ ಎಂದು ಅಂದಾಜಿಸಲಾಗಿದೆ. ಚಾಲಕ ಅದೃಷ್ಟವಶಾತ್ ಪಾರಾಗಿದ್ದಾರೆಂದು ತಿಳದು ಬಂದಿದೆ.

ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದೆ.ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಈ ಕಾರಣಕ್ಕೆ ಉರುಳಿ ಬಿದ್ದಿದೆ. ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ. ಗುದ್ದಿದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿ ಸಮಾಜ ಸೇವಕ ಆರಿಫ್ ಹಾಗೂ ಅಬ್ದುಲ್ ರೆಹಮಾನ್ ಕಾರ್ಯಚರಣೆಯಲ್ಲಿ ಇದ್ದರು.

See also  ಮಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಪರವಾಗಿ ಪ್ರತಿಭಟನೆ ವೇಳೆ ಹಿಂಸಾಚಾರ..! ಬಸ್ಸಿನ ಗಾಜು ಒಡೆದ ಮೂವರ ಬಂಧನ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget