ಕರಾವಳಿ

ಮೂರು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ:ಚಾಲಕ ಪರಾರಿ,ಅಂದಾಜು 70 ಸಾವಿರ ನಷ್ಟ

ನ್ಯೂಸ್ ನಾಟೌಟ್:ಅಪರಿಚಿತ ವಾಹನವೊಂದು ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ವಿಟ್ಲ-ಮಂಗಳೂರು ರಸ್ತೆಯ ಕೆಲಿಂಜ ಪಾತ್ರತೋಟ ಎಂಬಲ್ಲಿ ಸಂಭವಿಸಿದೆ.ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ನೆಲಕ್ಕುರುಳಿದ ವಿದ್ಯುತ್ ಕಂಬ:

ಘಟನೆಯಿಂದ ಮೂರು ವಿದ್ಯುತ್ ಕಂಬಗಳು ನೆಲಕ್ಕುರುಳಿದೆ.ಕಲ್ಲು, ಮಣ್ಣು ಸಾಗಾಟ ಲಾರಿ ಆಗಿರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ.ಇದರಿಂದ ಅಂದಾಜು 70 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ವಿಟ್ಲ ಮೆಸ್ಕಾಂ ಶಾಖಾಧಿಕಾರಿ ಸತೀಶ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ನೂತನ ಪದಾಧಿಕಾರಿಗಳ ಆಯ್ಕೆ,ಫೆ.24ರಂದು ಕಾರ್ಯಕ್ರಮ.

ಸುಳ್ಯ: ಸೈಂಟ್ ಜೋಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ;ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಯಾರ್ಯಾರು ಆಯ್ಕೆಯಾಗಿದ್ದಾರೆ?

ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಬ್ಯಾಂಕ್ ಮ್ಯಾನೇಜರ್..? ಕರಾವಳಿಯಲ್ಲೊಂದು ರಕ್ತ ಚರಿತ್ರೆ