ಕರಾವಳಿರಾಜಕೀಯ

ಸಿ.ಎಂ.ವಿರುದ್ದ ಆರೋಪ ಮಾಡಿರುವ ಪೂಂಜಾ ಅವರು ಕ್ಷಮೆಯಾಚಿಸಬೇಕು,ಇಲ್ಲದಿದ್ದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ-ಹರೀಶ್ ಕುಮಾರ್

343

ನ್ಯೂಸ್ ನಾಟೌಟ್ : ಸಿ.ಎಂ. ಸಿದ್ದರಾಮಯ್ಯ ವಿರುದ್ದ ಗಂಭೀರ ಆರೋಪ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಕೂಡಲೇ ಕ್ಷಮೆ ಯಾಚಿಸಬೇಕು.ಒಂದು ವೇಳೆ ಕ್ಷಮೆ ಯಾಚಿಸದಿದ್ದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಮಂಗಳೂರಿನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಸಿ.ಎಂ ಸಿದ್ದರಾಮಯ್ಯ ಅವರು ೨೪ ಕೊಲೆಗಳನ್ನು ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪಗಳನ್ನು ಮಾಡಿದ್ದು,ಈಗಾಗಲೇ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ ದೂರುಗಳನ್ನು ದಾಖಲಿಸಲಾಗಿದೆ.ಜಿಲ್ಲಾ ಕಾಂಗ್ರೆಸ್ ನಿಂದ ಕಾನೂನು ತಜ್ಞ ರೊಂದಿಗೆ ಮಾತುಕತೆ ನಡೆಸಿದ್ದು, ಕ್ರಿಮಿನಲ್ ಮತ್ತು ಸಿವಿಲ್ ಎರಡೂ ವಿಭಾಗದಲ್ಲಿ ಮೊಕದ್ದಮೆ ಹೂಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.ಚುನಾವಣೆ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಿಕೆ ಮಾಡಲಾಗಿದ್ದು, ಇದರಿಂದ ಪೂಂಜ ಜಯಗಳಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.

See also  ರೇವಣ್ಣ ಬಂಧನ ಹಿನ್ನೆಲೆ ಸ್ವಕ್ಷೇತ್ರದಲ್ಲಿ ಇಂದು(ಫೆ.5) ಜೆಡಿಎಸ್ ಪ್ರತಿಭಟನೆ..! ಕಿಡ್ನ್ಯಾಪ್ ಆಗಿದ್ದ ಮಹಿಳೆಗೆ ಕೌನ್ಸಿಲಿಂಗ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget