ಕರಾವಳಿಕೊಡಗುಸುಳ್ಯ

ಮಡಿಕೇರಿ: ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿಯನ್ನು ಗಾಯಗೊಳಿಸಿದ್ದ ಪ್ರಕರಣ,ಬಂಟ್ವಾಳ ಮೂಲದ ಚಾಲಕ ಅರೆಸ್ಟ್

ನ್ಯೂಸ್ ನಾಟೌಟ್‌ : ಬಂಟ್ವಾಳ ಮೂಲದ ಚಾಲಕನೊಬ್ಬ ಸಂಚಾರಿ ಪೊಲೀಸ್‌ ಸಿಬ್ಬಂದಿಯೊಬ್ಬರಿಗೆ ಕಾರು ಹತ್ತಿಸಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಕಾರು ಚಾಲಕ ನಝೀರ್(೨೭)ನನ್ನು ಪೊಲೀಸರು ಬಂಧಿಸಿದ್ದಾರೆ.

ಅ.೨೦ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ವಾಹನ ದಟ್ಟಣೆ ಉಂಟಾಗಿತ್ತು.ಈ ವೇಳೆ ಸಂಚಾರಿ ಪೊಲೀಸ್‌ ಸಿಬ್ಬಂದಿಯೊಬ್ಬರು ಕರ್ತವ್ಯನಿರತರಾಗಿದ್ದಾಗ ಅವರ ಸೂಚನೆಯನ್ನು ನಿರ್ಲಕ್ಷಿಸಿ ಕಾರು ಚಲಾಯಿದ್ದು ಅಲ್ಲದೇ ಪೊಲೀಸ್‌ ಸಿಬ್ಬಂದಿಗೆ ಗಾಯವಾದ ಘಟನೆಯೂ ನಡೆದಿತ್ತು.ಇದಾದ ಬಳಿಕ ಕಾರು ಚಾಲಕ ನಾಪತ್ತೆಯಾಗಿದ್ದ.ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿಯೂ ಸೆರೆಯಾಗಿತ್ತು.ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಜರಾಮನ್ ಶ್ಲಾಘಿಸಿದ್ದಾರೆ.

Related posts

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆ

ಮಂಗಳೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಎದೆನೋವು,ಉಸಿರಾಟದ ಸಮಸ್ಯೆಗೆ ಆಸ್ಪತ್ರೆಗೆ ದಾಖಲಾಗಿದ್ದ ಯುವಕ,ಚಿಕಿತ್ಸೆ ಫಲಿಸದೆ ಮೃತ್ಯು