ಕರಾವಳಿ

ಸಮಾಜದ ಸ್ವಾಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕ್ರಮ: ಡಾ. ವಿಕ್ರಂ ಅಮಟೆ

ನ್ಯೂಸ್‌ನಾಟೌಟ್‌: ಬಾಲಕನಿಗೆ ಥಳಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿ ಸಮಾಜದ ಸ್ವಾಥ್ಯ ಕೆಡಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಸುಬ್ರಹ್ಮಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ಬಾಲಕನಿಗೆ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗಿದೆ. ಈ ಘಟನೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈ ರೀತಿಯ ಹಳೇಯ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ನಡುವೆ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ತಿಳಿಸಿದ್ದಾರೆ

Related posts

ಸಂಪಾಜೆ: ರಾಷ್ಟ್ರೀಯ ಹೆದ್ದಾರಿಗೆ ಉರುಳಿದ ಬೃಹತ್ ಮರ, ವಾಹನ ಸಂಚಾರ ಅಸ್ತವ್ಯಸ್ತ

ತುಳುನಾಡಿನ ದೈವ ಕೋಲ ಪ್ರದರ್ಶನಕ್ಕಿಟ್ಟ ವಸ್ತುವಲ್ಲ, ಸದನದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್‌ ಆಕ್ರೋಶ

ಪೆರಾಜೆ ಗ್ರಾಮದಲ್ಲಿ ಸಂಭ್ರಮ-ಸಡಗರ,ಇಂದಿನಿಂದ ಮಾ.5ರವರೆಗೆ ಶ್ರೀ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ