ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಸಂಘಕ್ಕೆ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ಆಶೀರ್ವಾದ ಶ್ರೀರಕ್ಷೆ, ಕಾವೂರಿನಲ್ಲಿ ನೂತನ ಪದಾಧಿಕಾರಿಗಳೊಂದಿಗೆ ಚರ್ಚೆ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸಂಘದ ಸದಸ್ಯರು ಸೋಮವಾರ (ಮಾ.4) ಬೆಳಗ್ಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಇದೇ ವೇಳೆ ಸ್ವಾಮೀಜಿಯವರು ನೂತನ ಪದಾಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಸಮುದಾಯದ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಯಿತು.ಸಮಾಜದ ಆಸ್ತಿಯಾಗಿರುವ ಯುವಕರನ್ನು ಒಗ್ಗೂಡಿಸಿಕೊಂಡು ಸಮಾಜದ ಬೆಳವಣಿಗೆಗೆ ಶ್ರಮಿಸಿಕೊಂಡು ಹೋಗುವಂತೆ ಸ್ವಾಮೀಜಿಗಳು ಹೊಸ ತಂಡಕ್ಕೆ ಕಿವಿಮಾತು ಹೇಳಿದರು. ಮಂಗಳೂರು ಶ್ರೀ ಆದಿಚುಂಚನಗಿರಿ ಶಾಖೆಯ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು.

Related posts

ಪುತ್ತೂರು: ನವವಿವಾಹಿತೆ ಹೃದಯಾಘಾತಕ್ಕೆ ಬಲಿ!

ಸುಳ್ಯ: ಬೈಕ್ -ರಿಕ್ಷಾ ಮುಖಾಮುಖಿ,ಬೈಕ್ ಸವಾರ ಗಂಭೀರ ,ಮಂಗಳೂರಿನಲ್ಲಿ ಚಿಕಿತ್ಸೆ

ಪೆಟ್ಟು ತಡೆಯಲು ಬಂದವನಿಗೆ ಹಿಗ್ಗಾಮುಗ್ಗಾ ಥಳಿತ, ಸಾವು