ಕರಾವಳಿರಾಜಕೀಯರಾಜ್ಯವೈರಲ್ ನ್ಯೂಸ್ಸಿನಿಮಾ

ಡಿಕೆಶಿಯನ್ನು ಭೇಟಿಯಾದ ದರ್ಶನ್ ಪತ್ನಿ..! ಕುತೂಹಲ ಮೂಡಿಸಿದ ವಿಜಯಲಕ್ಷ್ಮಿ ನಡೆ..!

251

ನ್ಯೂಸ್ ನಾಟೌಟ್ : ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದು ಈ ಪ್ರಕರಣವಾಗಿ ಮಾತನಾಡಲು ಇದೀಗ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನೆಗೆ ದರ್ಶನ್(Darshan) ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ.

ದರ್ಶನ್ ಪ್ರಕರಣದ ಕುರಿತು ವಿಜಯಲಕ್ಷ್ಮಿ, ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಅನ್ಯಾಯ ಆಗಿದ್ಯಾ? ಹೇಗೆ ಎಂದು ಡಿ.ಕೆ.ಶಿವಕುಮಾರ್ ವಿಚಾರಿಸಿದ್ದಾರೆ. ನಿನ್ನೆ (ಜು.23) ರಾಮನಗರದ ಕಾರ್ಯಕ್ರಮವೊಂದರಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾದ್ದರು.

ಅದರ ಬಗ್ಗೆ ನಾಳೆ ಮಾತನಾಡ್ತೀನಿ. ದರ್ಶನ್ ಅವರ ಪತ್ನಿ ಭೇಟಿ ಮಾಡೋಕೆ ಸಮಯ ಕೇಳಿದ್ದಾರೆ. ನಾಳೆ ಬೆಳಗ್ಗೆ ಅವರನ್ನ ಭೇಟಿ ಮಾಡ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದರು. ಏನಾದರೂ ಅನ್ಯಾಯ ಆಗಿದ್ರೆ ಸರಿಪಡಿಸಲು ಪ್ರಯತ್ನ ಮಾಡ್ತೇನೆ. ಆದರೆ ನಾವು ಕಾನೂನಿಗೆ ಗೌರವ ಕೊಡಬೇಕು. ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಯಾರಿಗೇ ಆಗಿದ್ದರೂ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದವರೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಡಿಕೆಶಿ ಎಂದು ಹೇಳಿದ್ದಾರೆ.

Click

https://newsnotout.com/2024/07/pigeon-dove-and-boy-dddissue-electric-tragedy-viral-news/
See also  ವಿಜಯೇಂದ್ರ ಇನ್ನೂ ಎಳಸು, ನಾವು ಪಕ್ಷ ಕಟ್ಟಿದ್ದಾಗ ಅವ ಇನ್ನೂ ಕಣ್ಣು ಬಿಟ್ಟಿರಲಿಲ್ಲ ಎಂದ ಈಶ್ವರಪ್ಪ..! ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಸ್ಥಾಪನೆಗೆ ಮುಂದಾದ ಬಿಜೆಪಿಯ ಬಂಡಾಯ ಮುಖಂಡ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget