Latestಕ್ರೈಂಬೆಂಗಳೂರುರಾಜಕೀಯ

ಡಿಕೆಶಿ ವಿರುದ್ಧ ₹2000 ಕೋಟಿ ಭ್ರಷ್ಟಾಚಾರ ಆರೋಪ..! ಸಿಬಿಐ, ಇಡಿ ಗೆ ದೂರು ನೀಡಿದ ಶಾಸಕ..!

2k

ನ್ಯೂಸ್ ನಾಟೌಟ್: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ ₹2 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಲೋಕಾಯುಕ್ತ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ.) ದೂರು ನೀಡಿದ್ದಾರೆ.

ಶಿವಕುಮಾರ್ ನಡೆಸುತ್ತಿರುವ ಭ್ರಷ್ಟಾಚಾರ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ. ಬೆಂಗಳೂರು ನಗರಕ್ಕೆ ಎರಡು ಸಾವಿರ ಕೋಟಿ ರೂಪಾಯಿ ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ವಿಶ್ವಬ್ಯಾಂಕ್‌ ನಿಂದ ಸಾಲ ರೂಪದಲ್ಲಿ ₹1700 ಕೋಟಿ ಪಡೆಯಲಾಗಿದೆ ಮತ್ತು ಸಾರ್ವಜನಿಕ ತೆರಿಗೆ ₹300 ಕೋಟಿ ಅನುದಾನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶಾಸಕ ಎಸ್‌.ಟಿ.ಸೋಮಶೇಖರ್‌ ಬಿಜೆಪಿಯ ಶಾಸಕರಾಗಿದ್ದರೂ ಕಾಂಗ್ರೆಸ್‌ ನ ಶಾಸಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕ್ಷೇತ್ರದ ವ್ಯಾಪ್ತಿಗೆ ಬಿಬಿಎಂಪಿಯ ಕೇವಲ ಐದು ವಾರ್ಡ್‌ಗಳಿದ್ದರೂ ಸುಮಾರು ₹232 ಕೋಟಿ ಹಂಚಿಕೆ ಮಾಡಲಾಗಿದೆ. ಇನ್ನು, ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ ಕಾಂಗ್ರೆಸ್‌ ನ ಸ್ಟಾರ್‌ ಚಂದ್ರು ಮಾಲೀಕತ್ವದ ಸ್ಟಾರ್‌ ಬಿಲ್ಡರ್ಸ್‌ ಕಂಪನಿಗೆ ಯಶವಂತಪುರ ಕ್ಷೇತ್ರಕ್ಕೆ ಹಂಚಿಕೆಯಾಗಿರುವ ಅನುದಾನದಲ್ಲಿ ಅವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ದೂರಿದ್ದಾರೆ.

ಬೆಂಗಳೂರು ನಗರಕ್ಕೆ ನೀಡುವ ಅನುದಾನ ವಿಚಾರದಲ್ಲಿ ಹೊರರಾಜ್ಯದ ಆಂಧ್ರಪ್ರದೇಶದ ಕೆಲವು ಬಲಿಷ್ಠ ಗುತ್ತಿಗೆದಾರರು ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ ಮಾಡಲು ಬಂದಿದ್ದಾರೆ. ಶೇ.15ರಷ್ಟು ಕಮಿಷನ್‌ ಹಣದ ಮುಂಗಡವನ್ನು ಈಗಾಗಲೇ ಯುವ ಕಾಂಗ್ರೆಸ್‌ನ ಅಧ್ಯಕ್ಷ ಮಂಜುನಾಥ್‌ಗೌಡ ಮೂಲಕ ಚರ್ಚಿಸಿ ಹಣ ಸಂದಾಯ ಮಾಡಲಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಸಂಬಂಧಿಗಳಿಗೆ ನೀಡಲು ಉದ್ದೇಶಿಸಲಾಗಿದೆ ಮುನಿರತ್ನ ಆರೋಪಿಸಿದ್ದಾರೆ.

See also  ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget