ನ್ಯೂಸ್ ನಾಟೌಟ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಿಂದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ಟೀಕೆಗೆ ಒಳಗಾಗಿದೆ. ಈ ಹೊತ್ತಿನಲ್ಲೇ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ.
ಹೈಕಮಾಂಡ್ ಬುಲಾವ್ ಹಿನ್ನೆಲೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದಾರೆ. ತುರ್ತು ಬುಲಾವ್ ಕಾರಣಕ್ಕೆ ಸತೀಶ್ ಜಾರಕಿಹೊಳಿ (Satish Jarkiholi) ಕೂಡ ದೆಹಲಿಯಲ್ಲಿದ್ದಾರೆ. ಇದು ಹಲವಾರು ಕುತೂಹಲ ಮೂಡಿಸಿದೆ. ಹೈಕಮಾಂಡ್ ದೊಡ್ಡ ನಿರ್ಧಾರ ಕೈಗೊಳ್ಳಲಿದೆಯೇ ಎಂಬ ಪ್ರಶ್ನೆ ಮೂಡಿದೆ.
ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟಕ್ಕೂ ಮೇಜರ್ ಸರ್ಜರಿ ಬೀಳಲಿದೆ ಎನ್ನಲಾಗುತ್ತಿದೆ. ಸಂಪುಟದ 6ರಿಂದ 10 ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ. ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಮಾತು ಕೇಳಿಬಂದಿದೆ.
ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಸಿಎಂ ಮತ್ತು ಡಿಸಿಎಂ ಕರ್ನಾಟಕ ಭವನದಲ್ಲಿ ಸಭೆ ನಡೆಸಿದ್ದರು. ನಂತರ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮಾಂಸಾಹಾರ ನಿಷೇಧಿಸಿದ ಜಗತ್ತಿನ ಏಕೈಕ ನಗರ..! ‘ಮಾಂಸ ಮುಕ್ತ ನಗರ’ ಎಂದು ಘೋಷಿಸಿದ್ದೇಕೆ ಭಾರತದ ಈ ನಗರ..?
ಮಕ್ಕಳ ಜೊತೆ ಪತ್ನಿ ಮನೆ ಬಿಟ್ಟು ಹೋದದ್ದಕ್ಕೆ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ..! ಮೂರಂತಸ್ತಿನ ಮನೆ ಈಗ ಸ್ಮಶಾನ..!