ಬೆಂಗಳೂರುರಾಜಕೀಯವೈರಲ್ ನ್ಯೂಸ್

ಡಿಕೆ ಶಿವಕುಮಾರ್ ​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಒಕ್ಕಲಿಗ ಸ್ವಾಮೀಜಿ..! ಇದಕ್ಕೆ ಸಿದ್ದರಾಮಯ್ಯ ಹೇಳಿದ್ದೇನು..?

194

ನ್ಯೂಸ್ ನಾಟೌಟ್: ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್ ​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿಯೊಬ್ಬರು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಅಪರೂಪದ ವಿದ್ಯಮಾನಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗುರುವಾರ(ಜೂ.27) ನಡೆದಿದೆ.

ಸಮಾರಂಭದಲ್ಲಿ ಭಾಗವಹಿಸಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ವೇದಿಕೆ ಮೇಲೆಯೇ ಸಿದ್ದರಾಮಯ್ಯರನ್ನು ಉದ್ದೇಶಿಸಿ, ನಿಮಗೆ ಅನುಭವ ಇದೆ, ಈಗ ಡಿಕೆ ಶಿವಕುಮಾರ್​​ಗೆ ಅವಕಾಶ ಮಾಡಿಕೊಡಿ ಎಂದಿದ್ದಾರೆ. ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಸಿಎಂ ಸ್ಥಾನ ಡಿಕೆ ಶಿವಕುಮಾರ್ ​​ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಶ್ರೀಗಳು ಮತ್ತೊಮ್ಮೆ ಮನವಿ ಮಾಡಿದ ಘಟನೆ ನಡೆದಿದೆ.

ಎಲ್ಲವನ್ನೂ ಪಕ್ಷದ ಹೈಕಮಾಂಡ್​ ನಿರ್ಧಾರ ಮಾಡಲಿದೆ. ಹೈಕಮಾಂಡ್​ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಶ್ರೀಗಳ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ ಎನ್ನಲಾಗಿದೆ.

Click 👇

https://newsnotout.com/2024/06/lk-advani-doctors-kannada-news-health-issue-wednesday
https://newsnotout.com/2024/06/kodagu-bhagamandala-madikeri-kannada-news-triveni
https://newsnotout.com/2024/06/tesla-kannada-news-doctor-of-indian-origin-in-america-his-wife-and-baby-issue
See also  ಶಿಕ್ಷಕರು ಸರಿಯಾರಿ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ..! 258 ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಅವ್ಯವಸ್ಥೆ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget