ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಗ್ರರ ತರಬೇತಿ ತಾಣ

ನ್ಯೂಸ್ ನಾಟೌಟ್: ಪಿಎಫ್ಐ ಐದು ವರ್ಷ ಬ್ಯಾನ್ ಆದ ಬೆನ್ನಲ್ಲೇ ಇದೀಗ ಇಡೀ ದೇಶವೇ ಬೆಚ್ಚಿಬೀಳಿಸುವ ಸ್ಪೋಟಕ ಮಾಹಿತಿಯೊಂದನ್ನು ಎನ್ಐಎ ಅಧಿಕಾರಿಗಳು ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧೆಡೆ ಮುಸ್ಲಿಂ ಯುವಕರಿಗೆ ಪಿಎಫ್‌ಐನಿಂದ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಇದ್ದಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಪಿಎಫ್‌ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಪುತ್ತೂರು ಸಮೀಪದ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಯುವಕರಿಗೆ ಪಿಎಫ್‌ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿಯನ್ನು ಕಲೆ ಹಾಕಿದ್ದಾರೆ. 2007 ರಿಂದ ಸಾವಿರಾರು ಯುವಕರಿಗೆ ಟ್ರೈನಿಂಗ್ ಇಡಲಾಗುತ್ತಿತ್ತು. ಈ ಸಂಬಂಧ ಆಯೂಬ್ ಅಗಾಡಿ ಎಂಬ ಟ್ರಸ್ಟಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ಇಂಡಿಯಾ (ಪಿಎಫ್‌ಐ) ಮತ್ತು ಅದರ ಎಂಟು ಅಂಗಸಂಸ್ಥೆಗಳ ಮೇಲೆ ಐದು ವರ್ಷಗಳ ಕಾಲನಿಷೇಧ ಹೇರಿದೆ. ಈ ಮೂಲಕ ಪಿಎಫ್‌ಐ ನ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ.

Related posts

102ನೇ ವಯಸ್ಸಿನಲ್ಲಿ 7,000 ಅಡಿ ಎತ್ತರದಿಂದ ಸ್ಕೈಡೈವ್ ಮಾಡಿದ ಅಜ್ಜಿ..! ಇಲ್ಲಿದೆ ವೈರಲ್ ವಿಡಿಯೋ

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಮತ್ತಷ್ಟು ತಿರುವು! ಹಾಲಶ್ರೀ ಮಠದಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕಿದ್ದೇನು? ಮಹಜರು ವೇಳೆ ಹಾಲಶ್ರೀ ಕುಟುಂಬದ ಜೊತೆ ಮಾತಾಡಿಲ್ಲವೇಕೆ?

ಕಾರ್ಕಳ: ಬಡವರಿಗೆ ಮನೆ ನಿರ್ಮಿಸಿ ಹಸ್ತಾಂತರಿಸಿದ ರೋಟರಿ ಸಂಸ್ಥೆ