ಕ್ರೈಂ

ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವೈದ್ಯ..!

ವಿಜಯಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವೈದ್ಯನೊಬ್ಬ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಜಾರಾ ಕ್ರಾಸ್ ಬಳಿ ನಡೆದಿದೆ.

ಡಾ. ಆರ್‌ಎನ್ ಬಿರಾದರ್ ಪ್ಯಾರಾಮೆಡಿಕಲ್ ಕಾಲೇಜಿನ ಅಧ್ಯಕ್ಷ ಡಾ. ರಮೇಶ್ ಗೌಡ ಬಿರಾದಾರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಡಾ. ರಮೇಶ್ ಗೌಡ ಪ್ಯಾರಾ ಮೆಡಿಕಲ್ ಕಾಲೇಜಿನ ಮೊದಲ ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ವಾರದ ಹಿಂದೆ ಪತ್ನಿಯೊಂದಿಗೆ ಜಗಳವಾಡಿ ತವರಿಗೆ ಕಳುಹಿಸಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 

ರಮೇಶ್ ಗೌಡ ಬೆಂಕಿ ಹಚ್ಚಿದ್ದರ ಕಾರಣ ಕಟ್ಟಡಕ್ಕೂ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. 

Related posts

ಪ್ರಜ್ವಲ್ ಪ್ರಕರಣ: ಸಂತ್ರಸ್ತೆಯ ಅಪಹರಣ ಕೇಸ್ ನಲ್ಲಿ ಮತ್ತೆ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ..! ಸುಪ್ರಿಂಕೋರ್ಟ್ ನಿಂದ ನೋಟಿಸ್ ಜಾರಿ

ಸೇನಾ ಹೆಲಿಕಾಪ್ಟರ್‌ ಪತನ..! ಕಳೆದ ಎರಡು ತಿಂಗಳಲ್ಲಿ ಮೂರನೇ ಬಾರಿ ದುರ್ಘಟನೆ!

ಕೊರಗಜ್ಜನ ಕವಿತೆಗಳಲ್ಲಿ ಆಕ್ಷೇಪಾರ್ಹ ಪದ ಬಳಕೆ, ಜಾಲತಾಣಗಳಲ್ಲಿ ಕುಹಕವಾಡುತ್ತಿರುವವರು ಯಾರು..?