ಕ್ರೈಂ

ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವೈದ್ಯ..!

419
Spread the love

ವಿಜಯಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವೈದ್ಯನೊಬ್ಬ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಘಟನೆ ವಿಜಯಪುರದ ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಜಾರಾ ಕ್ರಾಸ್ ಬಳಿ ನಡೆದಿದೆ.

ಡಾ. ಆರ್‌ಎನ್ ಬಿರಾದರ್ ಪ್ಯಾರಾಮೆಡಿಕಲ್ ಕಾಲೇಜಿನ ಅಧ್ಯಕ್ಷ ಡಾ. ರಮೇಶ್ ಗೌಡ ಬಿರಾದಾರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಡಾ. ರಮೇಶ್ ಗೌಡ ಪ್ಯಾರಾ ಮೆಡಿಕಲ್ ಕಾಲೇಜಿನ ಮೊದಲ ಮಹಡಿಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ವಾರದ ಹಿಂದೆ ಪತ್ನಿಯೊಂದಿಗೆ ಜಗಳವಾಡಿ ತವರಿಗೆ ಕಳುಹಿಸಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 

ರಮೇಶ್ ಗೌಡ ಬೆಂಕಿ ಹಚ್ಚಿದ್ದರ ಕಾರಣ ಕಟ್ಟಡಕ್ಕೂ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. 

See also  ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ್ರಾ ಪ್ರಾಂಶುಪಾಲೆ..? ಈ ಶಾಲೆಯಲ್ಲಿ ನಡೆದ ಅಮಾನವೀಯ ಘಟನೆ ಬಗ್ಗೆ ಪೋಷಕರು ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget