ಕ್ರೈಂವಿಡಿಯೋವೈರಲ್ ನ್ಯೂಸ್

ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ..! ಕ್ಯಾನ್ಸರ್ ಚಿಕಿತ್ಸೆಗಾಗಿ ದಾಖಲಾಗಿದ್ದ ಆರೋಪಿಯ ತಾಯಿ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಚೆನೈನ ಕಲೈನರ್ ಸೆಂಟಿನರಿ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ(ನ13) ವೈದ್ಯರೊಬ್ಬರಿಗೆ ರೋಗಿಯ ಮಗ ಚಾಕುವಿನಿಂದ ಮನಬಂದಂತೆ ಇರಿದ ಘಟನೆ ನಡೆದಿದೆ.

ವೈದ್ಯ ಡಾ.ಬಾಲಾಜಿ ಎಂಬವರಿಗೆ ಏಳು ಇರಿತದ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಯಾದ ಚೆನ್ನೈ ನಿವಾಸಿ ವಿಘ್ನೇಶ್ ಎಂಬಾತನನ್ನು ಬಂಧಿಸಲಾಗಿದೆ. ಆತನ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕ್ಯಾನ್ಸರ್ ವಾರ್ಡ್ ನಲ್ಲಿ ಈ ಘಟನೆ ನಡೆದಿದ್ದು, ಡಾ.ಬಾಲಾಜಿ ಕೆಲಸ ಮಾಡುತ್ತಿದ್ದ ವೇಳೆ ವಿಘ್ನೇಶ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಹಿಡಿಯಲಾಗಿದೆ.
ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಗಾಯಗೊಂಡ ವೈದ್ಯರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಮತ್ತು ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ತನಿಖೆಯ ಬಳಿಕ ನಿಖರ ಕಾರಣ ತಿಳಿಯಬೇಕಿದೆ.

Related posts

ಮೆಟ್ರೊದೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಯುವಕರು..! ಇಲ್ಲಿದೆ ವೈರಲ್ ವಿಡಿಯೋ

ಪಾರ್ಲೆ ಜಿ ಬಿಸ್ಕೆಟ್​​ ಬಳಸಿ ಬಿರಿಯಾನಿ ತಯಾರಿಸಿದ ಮಹಿಳೆ..! ಇಲ್ಲಿದೆ ವೈರಲ್ ವಿಡಿಯೋ ​

ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆ..! ಈ ಬಗ್ಗೆ ಅಲ್ಲಿನ ಪ್ರಧಾನ ಅರ್ಚಕ ಹೇಳಿದ್ದೇನು..?