ಕ್ರೈಂ

ಸುಳ್ಯ: ಬೈಕ್ ಗೆ ಅಡ್ಡ ಬಂದ ಬೀದಿ ನಾಯಿ, ಬೈಕ್ ಪಲ್ಟಿ

ನ್ಯೂಸ್ ನಾಟೌಟ್ : ಮಡಿಕೇರಿ ಕಡೆಯಿಂದ ಬಂದ ಬೈಕ್ ವೊಂದು ಸುಳ್ಯದ ಹಳೆಗೇಟು ಸಮೀಪದ ಮಸೀದಿಯ ಬಳಿ ನಿಯಂತ್ರಣ ತಪ್ಪಿ ಕೆಳಕ್ಕೆ ಉರುಳಿ ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ವೇಗದಲ್ಲಿ ಬರುತ್ತಿದ್ದ ಬೈಕ್‌ಗೆ ಬೀದಿ ನಾಯಿಯೊಂದು ದಿಢೀರ್ ಅಡ್ಡ ಬಂದಿದೆ. ಹೀಗಾಗಿ ಬೈಕ್ ಸವಾರರು ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದರು ಎಂದು ತಿಳಿದು ಬಂದಿದೆ. ಇಬ್ಬರು ಕೂಡ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರಮುಖ ನಗರಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ವಾಹನ ಸವಾರರಿಗೆ , ನಡೆದುಕೊಂಡು ಹೋಗುವವರಿಗೆ ನಿತ್ಯ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವನ್ನು ಸ್ಥಳೀಯ ಆಡಳಿತ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ.

Related posts

ಉಪ್ಪಿನಂಗಡಿ: ಊಟ ಮಾಡುತ್ತಿದ್ದ ಮಹಿಳೆ ಮೇಲೆ ಕೈ ಹಾಕಿದ ದುಷ್ಕರ್ಮಿ

ಹತ್ಯೆಗೂ ಮುನ್ನ ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್..! ಇಲ್ಲಿದೆ ವಿಡಿಯೋ

ಬಿಎಸ್ ವೈ ಸುತ್ತ ಐಟಿ ಬಲೆ: ವಿಜಯೇಂದ್ರ ಆಪ್ತನ ಮನೆಯಿಂದ ದಾಖಲೆ ವಶ