ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಅಮೆರಿಕದ ಮಾಜಿ ಅಧ್ಯಕ್ಷನ ಮೇಲೆ ಮತ್ತೆ ಗುಂಡಿನ ದಾಳಿ..! ಹೇಗಿತ್ತು ದಾಳಿಕೋರನನ್ನು ಹಿಡಿದ ರೋಚಕ ಕಾರ್ಯಾಚರಣೆ..?

201

ನ್ಯೂಸ್ ನಾಟೌಟ್: ಅಮೆರಿಕದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿಯಾಗಿರುವ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಫ್ಲೋರಿಡಾದ ಗಾಲ್ಫ್ ಕ್ಲಬ್ ನಲ್ಲಿದ್ದ ಟ್ರಂಪ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಆದರೆ, ಟ್ರಂಪ್ ಪವಾಡ ಸದೃಶ್ಯವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ (USA) ಪೆನ್ಸಿಲ್ವೇನಿಯಾದಲ್ಲಿರುವ ಬಟ್ಲರ್ ಎಂಬಲ್ಲಿ ಗುಂಡಿನ ದಾಳಿಯಾಗಿತ್ತು. ಅಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಸುಮಾರು 442 ಅಡಿಗಷ್ಟು ದೂರದಿಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಅಂದು ಹಾರಿದ ಗುಂಡು ಅವರ ಬಲಕಿವಿಯ ತುದಿಗೆ ತಾಕಿ ರಕ್ತ ಸೋರಿಕೆಯಾಗಿತ್ತು, ಕೂದಲೆಳೆ ಅಂತರದಲ್ಲಿ ಟ್ರಂಪ್‌ ಪಾರಾಗಿದ್ದರು. ಇದಾದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿರುವುದು ಅಮೆರಿಕದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಫ್ಲೋರಿಡಾದ ಸ್ಥಳೀಯ ಕಾಲಮಾನ ಸೆ. 15ರಂದು ಸಂಜೆಯಲ್ಲಿ ಫ್ಲೋರಿಡಾದಲ್ಲಿರುವ ವೆಸ್ಟ್ ಪಾಮ್ ಬೀಚ್ ನಲ್ಲಿರುವ ತಮ್ಮದೇ ಗಾಲ್ಫ್ ಕ್ಲಬ್ ಆದ ಟ್ರಂಪ್ ಇಂಟರ್ ನ್ಯಾಷನಲ್ ಗಾಲ್ಫ್ ಕ್ಲಬ್‌ಗೆ (Golf Club) ಟ್ರಂಪ್ ಆಗಮಿಸಿದ್ದರು. ಗಾಲ್ಫ್ ಆಟ ಮುಗಿಸಿ ಇನ್ನೇನು ಮನೆಗೆ ಹೊರಡಬೇಕು ಎನ್ನುವಷ್ಟರಲ್ಲಿ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.

ಫ್ಲೋರಿಡಾದ ರಾಜ್ಯ ಹೆದ್ದಾರಿ 714ರ ಬಳಿಯೇ ಸಾಗುವ ಇಂಟರ್ ಸ್ಟೇಟ್ ಹೆದ್ದಾರಿ 75ರಲ್ಲಿ ವೇಗವಾಗಿ ಬರುತ್ತಿದ್ದ ಕಾರನ್ನು ತಡೆದು ಪರಿಶೀಲಿಸಿದಾಗ ಶಂಕಿತ ದಾಳಿಕೋರ ಅದರಲ್ಲಿದ್ದುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Click

https://newsnotout.com/2024/09/mangaluru-masjid-issue-vhp-protest-in-bc-road-kannada-news/
https://newsnotout.com/2024/09/darshan-thugudeepa-in-ballary-and-secrete-latter-to-him-from-lawyer/
https://newsnotout.com/2024/09/palestain-flag-in-chikkamagaluru-minor-boys-are-under-police-custody-kannada-news/
https://newsnotout.com/2024/09/talakavery-thirtha-udbhava-kananda-news-muhurtha-kannada-news/
See also  ನ್ಯಾಯಾಂಗ ಬಂಧನದ ಅವಧಿ ಇಂದು(ಆ.1) ಅಂತ್ಯ..! ಮತ್ತೆ ದರ್ಶನ್‌ ನನ್ನು ಜೈಲಿಗೆ ಕಳುಹಿಸಲು SIT ಸಕಲ ಸಿದ್ಧತೆ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget