ಕರಾವಳಿಕ್ರೈಂದೇಶ-ವಿದೇಶವಾಣಿಜ್ಯವೈರಲ್ ನ್ಯೂಸ್

ಕತ್ತೆಗಳನ್ನು ಮಾರಿ ರೈತರಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿದ ಕಂಪನಿ..! 300ಕ್ಕೂ ಅಧಿಕ ಅನ್ನದಾತರಿಗೆ ಆತಂಕ..!

186

ನ್ಯೂಸ್ ನಾಟೌಟ್ : ಕತ್ತೆಗಳನ್ನ (Donkey) ಮಾರಾಟ ಮಾಡಿ ಲಕ್ಷ ಲಕ್ಷ ದೋಚಿದ್ದ ಜಿನ್ನಿ ಮಿಲ್ಕ್ ಕಂಪನಿ ಪ್ರಕರಣಕ್ಕೆ ಸಂಬಂಧಿಸಿ ಕೇಸನ್ನು ಸಿಐಡಿ (CID)ತನಿಖೆಗೆ ವಹಿಸಲು‌ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದೆ. ಜಿನ್ನಿ ಮಿಲ್ಕ್ ಕಂಪನಿ ಎಂಡಿ, ಮ್ಯಾನೇಜರ್‌‌ 13.50 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ್ದಾರೆ.

ಇನ್ನೆರಡು ದಿನಗಳಲ್ಲಿ ಸಿಐಡಿ‌ ಅಧಿಕಾರಿಗಳ‌ ತಂಡ ಹೊಸಪೇಟೆಗೆ ಭೇಟಿ ನೀಡಲಿದೆ. ಕತ್ತೆ ಹಾಲಿನ ಮೋಸದ ಜಾಲಕ್ಕೆ ಸಿಲುಕಿ 300ಕ್ಕೂ ಅಧಿಕ ಅನ್ನದಾತರು ಪರದಾಡುತ್ತಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳಿಂದ ಹೊಸಪೇಟೆ ನಗರ ಠಾಣೆಗೆ ಆಗಮಿಸಿ ನೂರಾರು ರೈತರು ದೂರು ಸಲ್ಲಿಸುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ಆರು ತಿಂಗಳ ಹಿಂದೆ ‘ಜಿನ್ನಿ ಮಿಲ್ಕ್’ ಎಂಬ ಕಂಪನಿಯು ಆಫೀಸ್‌ಯೊಂದನ್ನ ತೆರೆದು ಕತ್ತೆಗಳ ಸಾಕಾಣಿಕೆ ಮಾಡಿ, ಹೈನುಗಾರಿಕೆಯಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ದುಡಿಯಿರಿ ಎಂದು ಸ್ಲೋಗನ್ ಹಾಕಿ ರೈತರಿಗೆ ಕತ್ತೆಗಳನ್ನ ಮಾರಾಟ ಮಾಡಿತ್ತು. ರೈತರು ಅದನ್ನ ನಂಬಿ ಮೂರು ಲಕ್ಷ ರೂಗೆ ಮೂರು ಕತ್ತೆ ಹಾಗೂ ಮೂರು ಕತ್ತೆ ಮರಿಗಳನ್ನ ಖರೀದಿ ಮಾಡಿದ್ದರು.

ಮೊದಲಿಗೆ ಒಂದು ಲೀಟರ್ ಕತ್ತೆ ಹಾಲಿಗೆ 2300 ರೂ ಕೊಟ್ಟು ಜಿನ್ನಿ ಕಂಪನಿಯೇ ಖರೀದಿ ಮಾಡುತ್ತಿತ್ತು. ಆದ್ರೆ, ಕಂಪನಿ ಟ್ರೇಡ್ ಲೈಸೆನ್ಸ್ ಹೊಂದಿಲ್ಲ ಎಂದು ವಿಜಯನಗರ ಜಿಲ್ಲಾಡಳಿತ ಆ ಆಫೀಸನ್ನ ಕ್ಲೋಸ್ ಮಾಡಿಸಿದೆ. ಲಕ್ಷಾಂತರ ಬಂಡವಾಳ ಹಾಕಿದ ಜನ್ರಿಗೆ ಜಿನ್ನಿ ಕಂಪನಿ ಮೋಸ ಮಾಡಿದೆ ಎನ್ನುವ ಆರೋಪ ಕೇಳಿಬಂದಿದೆ.

See also  ಚೆಂಬು:ಆನೆ ದಾಳಿ ಕೃಷಿ ನಷ್ಟ ಪ್ರದೇಶಕ್ಕೆ ಕೆಪಿಸಿಸಿ ರಾಜ್ಯ ವಕ್ತಾರ ಭೇಟಿ,ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನಿರ್ದೇಶನದ ಮೇರೆಗೆ ಆಗಮನ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget