ಕರಾವಳಿ

ಕಮೀಷನ್‌ಗಾಗಿ ಕಕ್ಷಿದಾರರನ್ನು ಸತಾಯಿಸಬೇಡಿ: ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಕಿವಿಮಾತು

443

ನ್ಯೂಸ್ ನಾಟೌಟ್: ನ್ಯಾಯ ಕೇಳಿಕೊಂಡು ಬಂದವರಿಗೆ ತಡ ಮಾಡದೆ, ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸಲು ವಕೀಲರು ಕಟಿಬದ್ಧರಾಬೇಕು, ಕಮೀಷನ್‌ಗಾಗಿ ಕಕ್ಷಿದಾರರನ್ನು ಸತಾಯಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋಟ್ ೯ನ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ತಿಳಿಸಿದ್ದಾರೆ.

ದ.ಕ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಮೂಡುಬಿದಿರೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಿರುವ ವಕೀಲರ ಭವನ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಇದು ಬೌದ್ಧಿಕ ಚರ್ಚೆಗಾಗಿ ಇರುವಂತಹ ಭವನ, ವಕೀಲರ ಸಂಘದಲ್ಲಿ ಶೇಕಡಾವಾರು ವ್ಯವಹಾರ ನಡೆಯುವುದಿಲ್ಲ ಎಂದು ತಿಳಿಸಿದರು.


ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಪ್ರಸನ್ನ ಬಿ. ವರಾಳೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹೈಕೋಟ್ ೯ನ ನ್ಯಾಯಮೂರ್ತಿಗಳಾದ ಬಿ.ವೀರಪ್ಪ, ಕೋರ್ಟ್ ನ ನ್ಯಾಯಮೂರ್ತಿ ಹಾಗೂ ದ.ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಮುಖ್ಯ ಅತಿಥಿಗಳಾಗಿದ್ದರು. ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರು, ಎಸ್.ವಿಶ್ವಜಿತ್ ಶೆಟ್ಟಿ, ಸಿ.ಎಂ ಜೋಶಿ, ಟಿ.ಜಿ ಶಿವಶಂಕರೇ ಗೌಡ, ಕೆ.ಎಸ್ ಭರತ್ ಕುಮಾರ್, ದ.ಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ.ಜೋಶಿ, ಶಾಸಕ ಉಮಾನಾಥ ಕೋಟ್ಯಾನ್, ಹೈಕೋಟ್ ೯ನ ಮಹಾವಿಲೇಖಾನಾಧಿಕಾರಿ ಮುರಳೀಧರ ಪೈ ಬಿ., ಹಿರಿಯ ವಕೀಲ ಪಿ.ಪಿ ಹೆಗ್ಡೆ, ಮೂಡುಬಿದಿರೆ ವಕೀಲರ ಸಂಘದ ಸ್ಥಾಪಕಾಧ್ಯಕ್ಷ ಎಂ.ಬಾಹುಬಲಿ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಎಸ್.ಲೋಬೊ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಕಾಂತರಾಜು ಬಿ.ಟಿ, ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಯಶವಂತ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

See also  ಹರೀಶ್ ಪೂಂಜಾ ನೀತಿ ಸಂಹಿತೆ ಉಲ್ಲಂಘನೆ, ಎರಡು ಪ್ರತ್ಯೇಕ ದೂರು ದಾಖಲು
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget