ಕರಾವಳಿಸಾಧಕರ ವೇದಿಕೆ

ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಗೆ ಡಾ.ಅನುರಾಧಾ ಕುರುಂಜಿ ಆಯ್ಕೆ

ನ್ಯೂಸ್ ನಾಟೌಟ್ : ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಸುಳ್ಯದ ಲೇಖಕಿ, ಕವಯಿತ್ರಿ ಡಾ. ಅನುರಾಧಾ ಕುರುಂಜಿ ಯವರು ಆಯ್ಕೆಯಾಗಿದ್ದಾರೆ.

ಉತ್ಸವದ ಪ್ರಯುಕ್ತ ಕವಿಗೋಷ್ಠಿ:

ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರುಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಹಂಪಿ ಉತ್ಸವವನ್ನು ಆರಂಭಿಸಿದ್ದು, 2023ರ ಹಂಪಿ ಉತ್ಸವವು ಜನವರಿ 27ರಿಂದ 29 ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದ್ದು, ಉತ್ಸವದ ಪ್ರಯುಕ್ತ ನಡೆಯಲಿರುವ ಕವಿಗೋಷ್ಠಿಯಲ್ಲಿ‌ ಡಾ. ಅನುರಾಧಾ ಕುರುಂಜಿಯವರು ಕವನ ವಾಚಿಸಲಿದ್ದಾರೆ. ಈಗಾಗಲೇ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ, ಕಾಸರಗೋಡು ಜಿಲ್ಲಾ,ಕೇರಳ ರಾಜ್ಯ ಮಟ್ಟದ ಕವಿಗೋಷ್ಠಿಗಳಲ್ಲಿ ಕವನ ವಾಚಿಸಿರುವ ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ, ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿಯಾಗಿದ್ದಾರೆ.

Related posts

ಸುಳ್ಯ: ಭಾರೀ ಗೆಲುವಿನತ್ತ ಸಾಗಿದ ಭಾಗೀರಥಿ ಮುರುಳ್ಯ

ಸುಳ್ಯ: ವಾಹನಗಳಿಗೆ ಅಡ್ಡ ಬರುತ್ತಿದ್ದ ಆಡುಗಳನ್ನು ಪಂಚಾಯತ್ ಆವರಣದಲ್ಲಿ ಕಟ್ಟಿಹಾಕಿದ ಸಿಬ್ಬಂದಿ..! ವಾರಿಸುದಾರರು ದಂಡ ಕಟ್ಟಿ ಬಿಡಿಸಿಕೊಳ್ಳುವಂತೆ ಪ್ರಕಟಣೆ

ಬೆಂಗಳೂರಲ್ಲಿ​ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್.​ಐ.ಆರ್ ದಾಖಲು..! ಇಲ್ಲಿದೆ ಸಂಪೂರ್ಣ ಮಾಹಿತಿ