ಕರಾವಳಿಪುತ್ತೂರು

ಜೂ.17 ರಂದು ಪುತ್ತೂರಿನಲ್ಲಿ ಡಾ.ಎಂ.ಮೋಹನ ಆಳ್ವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ

257

ನ್ಯೂಸ್‌ ನಾಟೌಟ್‌ ಪುತ್ತೂರು : ಕರ್ನಾಟಕ ರಾಜ್ಯ‌ ನಿವೃತ್ತ ನೌಕರರ ಸಂಘ ಪುತ್ತೂರು ಘಟಕದ ವತಿಯಿಂದ ಕೊಡಮಾಡುವ “ಸ್ವರ್ಣ ಸಾಧನಾ ಪ್ರಶಸ್ತಿಗೆ” ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರನ್ನು ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾದ ಸಮಾರಂಭ ಜೂ.17ರಂದು ಬೆಳಿಗ್ಗೆ 9.30ಕ್ಕೆ ಬಪ್ಪಳಿಗೆ ಜೈನ ಭವನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ‌ ಬಿ.ಐತಪ್ಪ ನಾಯ್ಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದ ಅನನ್ಯ ಸಾಧನೆ ಮಾಡಿದ ಡಾ.ಆಳ್ವ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವೈ.ಶಿವರಾಮಯ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಇತಿಹಾಸ ಸಂಶೋಧಕ, ನಿವೃತ್ತ ಪ್ರಾಧ್ಯಾಪಕ ಡಾ.ಪುಂಡಿಕಾಯಿ ಗಣಪಯ್ಯ ಭಟ್ ಅಭಿನಂದನಾ ಭಾಷಣ ಮಾಡುವರು. ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಪದವಿಪೂರ್ವ ಶಿಕ್ಷಣ ವಾಣಿಜ್ಯ ವಿಭಾಗದಲ್ಲಿ 600ರಲ್ಲಿ 600 ಅಂಕ ಪಡೆದು ರಾಜ್ಯಮಟ್ಟದ ವಿಶಿಷ್ಟ ಸಾಧನೆ ಮಾಡಿದ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಅನನ್ಯ ಕೆ.ಎ. ಅವರನ್ನು ಅಭಿನಂದಿಸಲಾಗುವುದು. ಅಲ್ಲದೆ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಹಿಮಾನಿ ಎ.ಸಿ., ನರಿಮೊಗರು ಸಾಂದೀಪನಿ ಸಂಸ್ಥೆಯ ತೇಜಸ್, ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉತ್ತಮ್ ಜಿ. ಅವರನ್ನು ಅಭಿನಂದಿಸಲಾಗುವುದು. ಸಂಘದ 61 ಹಿರಿಯ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಅವರು ತಿಳಿಸಿದರು.

ಸಂಘದ ಕೋಶಾಧಿಕಾರಿ ಶಾಂತಿ ಟಿ. ಹೆಗಡೆ, ಉಪಾಧ್ಯಕ್ಷರಾದ ಪ್ರೊ.ಎಂ.ವತ್ಸಲಾ ರಾಜ್ಞಿ, ರಾಮದಾಸ್ ಗೌಡ ಎಸ್., ಜತೆ ಕಾರ್ಯದರ್ಶಿ ಎನ್.ಶಶಿಕಲಾ ಸುದ್ದಿಗೋಷ್ಠಿಯಲ್ಲಿದ್ದರು.

See also  ಧರ್ಮಸ್ಥಳದಿಂದ ಸೌತಡ್ಕ ಗಣಪತಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತ, ಹಲವರಿಗೆ ಗಾಯ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget