ನ್ಯೂಸ್ ನಾಟೌಟ್ : ಸುಳ್ಯದ ನಿವೃತ್ತ ತಾಲೂಕು ಅರೋಗ್ಯ ಅಧಿಕಾರಿ ಡಾ. ನಂದಕುಮಾರ್ ಅವರು ಕೆವಿಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರ ಸೋಣಂಗೇರಿಯಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಏಪ್ರಿಲ್ 4 ಶುಕ್ರವಾರ ದಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಹಾಗೂ ವೈದ್ಯಕೀಯ ನಿರ್ದೇಶಕ ಡಾ. ಕೆ ವಿ ಚಿದಾನಂದ , ಉಪಾಧ್ಯಕ್ಷೆ ಶೋಭಾ ಚಿದಾನಂದ, ಡೀನ್ ಡಾ. ನೀಲಾಂಬಿಕೈ ನಟರಾಜನ್, ವೈದ್ಯಕೀಯ ಅಧೀಕ್ಷಕ ಡಾ. ಸಿ. ರಾಮಚಂದ್ರ ಭಟ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರು ಪ್ರೊ. ಡಾ ಲೀಲಾಧರ್ ಡಿ ವಿ, ಎಒಎಲ್ಇ ಕೌನ್ಸಿಲ್ ಸದಸ್ಯ ಹೇಮನಾಥ್ ಕೆ.ವಿ, ಜಗದೀಶ್ ಅಡ್ತಲೆ, ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೆರಾಲು, ಕೆವಿಜಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಪ್ರಾಂಶುಪಾಲರು, ಆಡಳಿತಗಾರರು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.