ಕರಾವಳಿಭಕ್ತಿಭಾವ

ಕಾಂಗ್ರೆಸ್ ಸರಕಾರದ ‘ಶಕ್ತಿ’ ಯೋಜನೆಗೆ ಖಾವಂದರ ಮೆಚ್ಚುಗೆ:ಸದನದಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪತ್ರ!

293

ನ್ಯೂಸ್ ನಾಟೌಟ್ : ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರೂ ಆಗಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದಾರೆ. 

ಈ ಪತ್ರವನ್ನು ಸಿ.ಎಂ ಸಿದ್ದು ಅವರು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಡಿ. ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. 

ಪತ್ರದಲ್ಲಿ “ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ‘ಶಕ್ತಿ ಯೋಜನೆ’ ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯ ಪ್ರಮಾಣ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ” ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ  ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಆಹ್ವಾನ ನೀಡಿದ್ದಾರೆ.

ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿದ್ದಕ್ಕೆ ಧನ್ಯವಾದ ಎಂದು ಪತ್ರದಲ್ಲಿ ಬರೆದಿದ್ದಲ್ಲದೇ ಗ್ಯಾರಂಟಿ ಯೋಜನೆಗಳ ಮೂಲಕ ಉಪಯುಕ್ತ ಕಾರ್ಯಕ್ರಮಗಳನ್ನ ನೀಡುತ್ತಿದ್ದೀರಿ ನಿಮಗೆ ಧನ್ಯವಾದಗಳು. ಧರ್ಮಸ್ಥಳಕ್ಕೆ ಬರುತ್ತಿರುವ ಮಹಿಳಾ ಭಕ್ತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದೀಗ ಇದೇ ವಿಚಾರ ಕಲಾಪದಲ್ಲೂ ಪ್ರತಿಧ್ವನಿಸಿದೆ. ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಮುಖ್ಯಂತ್ರಿ ಸಿದ್ದರಾಮಯ್ಯ, “ನಮ್ಮ ಸರ್ಕಾರದಿಂದ ರಾಜ್ಯದ ಜನ ಸಂತುಷ್ಠರಾಗಿದ್ದಾರೆ. ಧರ್ಮಸ್ಥಳ ಧರ್ಮಧಿಕಾರಿ ವಿರೇಂದ್ರ ಹೆಗ್ಗಡೆಯವರು ನಮ್ಮ ಯೋಜನೆಯನ್ನ ಮೆಚ್ಚಿ ಪತ್ರ ಬರೆದಿದ್ದಾರೆ ಎಂದಿದ್ದಾರೆ.

See also  ಮಂಗಳೂರಿನಲ್ಲಿ ಬಗೆದಷ್ಟು ಬಯಲಾಗುತ್ತಿದೆ ಡ್ರಗ್ಸ್ ವ್ಯವಹಾರ:ಮತ್ತೆ ನಾಲ್ವರು ಅರೆಸ್ಟ್, ಕಾರ್-ಮೊಬೈಲ್ ವಶ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget