ಕ್ರೈಂ

ಮದ್ಯಪಾನದ ಚಟ, ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ಆತ್ಮಹತ್ಯೆ

339
Spread the love

ಎಡಮಂಗಲ: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎಡಮಂಗಲದಲ್ಲಿ ನಿನ್ನೆ ನಡೆದಿದೆ.

ಮೃತರನ್ನು ಜಾಕೆ ಮಣಿಲ ಮನೆ ನಾರಾಯಣ ಗೌಡ (50) ಎಂದು ತಿಳಿದು ಬಂದಿದೆ. ಮನೆಯ ಒಳಗಡೆ ಪಕ್ಕಾಸಿಗೆ ನೈಲಾನ್ ಹಗ್ಗವನ್ನು ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮದ್ಯಪಾನದ ಚಟವಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಈ ರೀತಿ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮೃತರ ಪತ್ನಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ನೇಹಾ ಮಾದರಿ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿ..! ನಿದ್ದೆಯಲ್ಲಿದ್ದ ಆಕೆಗೆ ಚೂರಿ ಇರಿದು ಪರಾರಿ..!
  Ad Widget   Ad Widget   Ad Widget   Ad Widget   Ad Widget   Ad Widget