ಕ್ರೈಂವೈರಲ್ ನ್ಯೂಸ್

ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಆತ್ಮಹತ್ಯೆ..! ಎರಡು ದಿನ ಅದೇ ನೀರನ್ನು ಕುಡಿದರಾ ಜನ..?

ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾ ಘಟನೆ ಬೀದರ್ (Bidar) ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ದಾಸರ್ (27) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ. ಕುಡಿಯುವ ನೀರಿನಲ್ಲಿ ಶವ ಪತ್ತೆಯಾದ ಹಿನ್ನೆಲೆ, ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಟ್ಯಾಂಕ್ ನೀರು ಕುಡಿದು ಯಾರಿಗಾದರೂ ಆರೋಗ್ಯದ ಸಮಸ್ಯೆಯಾದರೆ ಅಗತ್ಯ ಚಿಕಿತ್ಸೆ ಪಡೆಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನವರಾತ್ರಿ ಗರ್ಬಾ ಆಚರಣೆ ವೇಳೆ ಮಹಾ ದುರಂತ..! 24 ಗಂಟೆಗಳಲ್ಲಿ 10 ಮಂದಿ ಕೊನೆಯುಸಿರೆಳೆದದ್ದು ಹೇಗೆ? ಏನಿದು ವಿಚಿತ್ರ ಘಟನೆ?

ಯಾವ ಬ್ಯಾಂಕ್ ಗಳಲ್ಲಿ ನಿಮ್ಮ ಹಣ ಹೆಚ್ಚು ಸುರಕ್ಷಿತ ಗೊತ್ತಾ..? RBI ಬಿಡುಗಡೆ ಮಾಡಿದ ಪಟ್ಟಿಯಲ್ಲೇನಿದೆ..?

ಸುಳ್ಯ: ಮಗನಿಗೆ ಕತ್ತಿಯಿಂದ ಕಡಿದ ತಂದೆ