ಕರಾವಳಿ

ಸುಳ್ಯ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಟ್ಟ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ, ಡಾ | ನಾಗಲಕ್ಷ್ಮೀ ಚೌಧರಿ ಪೊಲೀಸರ ಉದ್ದೇಶಿಸಿ ಹೇಳಿದ್ದೇನು..?

ನ್ಯೂಸ್ ನಾಟೌಟ್: ಸುಳ್ಯ ಪೊಲೀಸ್ ಠಾಣೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ|ನಾಗಲಕ್ಷ್ಮೀ ಚೌಧರಿ ಶನಿವಾರ ಭೇಟಿ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯದ ಕೇಸುಗಳು, ಪೋಕ್ಸೊ ಕೇಸ್ ಗಳು, ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣಗಳು ಸೇರಿದಂತೆ ಮಹಿಳೆಯರ ಮೇಲಿನ ಹಲವಾರು ದೌರ್ಜನ್ಯದ ಕೇಸ್ ಗಳ ಬಗ್ಗೆ ಪರಿಶೀಲನೆ ನಡೆಸಿದರು. ಸುಳ್ಯ ತಾಲೂಕಿನ ಕೇಸ್ ಗಳ ಬಗ್ಗೆ ಎ ಎಸ್ ಐ ಸರಸ್ವತಿ ಅವರಿಂದ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡರು. ಮಾತ್ರವಲ್ಲ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ನ್ಯಾಯ ಒದಗಿಸಿಕೊಡಬೇಕೆಂದು ತಿಳಿಸಿದರು. ಇದೇ ವೇಳೆ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ , ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಟಿಎಂ ಶಹೀದ್ ಸೇರಿದಂತೆ ಗಣ್ಯರು ಹಾಜರಿದ್ದರು.

Related posts

ಕೆವಿಜಿ ವೈದ್ಯಕೀಯ ಕಾಲೇಜಿನಲ್ಲಿ ‘ಮಣ್ಣು ಉಳಿಸಿ’ ಅಭಿಯಾನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ವರದಿ, ಪತ್ರಿಕೆಗೆ ಚಾಟಿ

ಒಂದೇ ದಿನ ಒಂದೇ ಮನೆಯಲ್ಲಿ ತಂದೆ-ಮಗ ಸಾವು,ಉಡುಪಿ ಪಡುಬಿದ್ರಿ ಕಂಚಿನಡ್ಕದಲ್ಲಿ ಘಟನೆ