ನ್ಯೂಸ್ ನಾಟೌಟ್ : ಸುಳ್ಯದ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ (ಆ.13) ಕಾಲೇಜಿನ ಎನ್.ಎಸ್.ಎಸ್. ಘಟಕ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕದ ಸಹಯೋಗದೊಂದಿಗೆ ನಶಮುಕ್ತ ಭಾರತ ಅಭಿಯಾನ ಆಯೋಜಿಸಲಾಯಿತು.
ಕಾರ್ಯಕ್ರಮದ ಪ್ರಯುಕ್ತ ಸೋಮವಾರ ಜನಜಾಗೃತಿ ಜಾಥಾ ಮತ್ತು ಮಾನವ ಸರಪಳಿಯನ್ನು ಸುಳ್ಯ ನಗರದಲ್ಲಿ ಹಮ್ಮಿಕೊಳ್ಳಲಾಯಿತು. ನಶಮುಕ್ತ ಭಾರತದ ಸಾಮೂಹಿಕ ಪ್ರತಿಜ್ಞೆಯನ್ನು ಬುಧವಾರ (ಆ.13) ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಶಲ್ಯ ತಂತ್ರ ವಿಭಾಗದ ಮುಖ್ಯಸ್ಥರಾದ ಡಾ. ಹರ್ಷವರ್ಧನ್ ಕೆ, ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸನತ್ ಕುಮಾರ್ ಡಿ ಜಿ, ಮತ್ತು ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರಧ್ವಾಜ್ ಬಿ, ಎನ್. ಎಸ್. ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ ಎ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು ಮತ್ತು ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.