ಕ್ರೈಂ

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ, ಓರ್ವನ ಬಂಧನ, 2.50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

290

ನ್ಯೂಸ್‌ ನಾಟೌಟ್‌: ಮಾದಕ ವಸ್ತು ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಸುಮಾರು 2.50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ‌.

ಬಂಧಿತ ಆರೋಪಿಯನ್ನು ಉಪ್ಪಳದ ನಿವಾಸಿ ಮೊಹಮ್ಮದ್ ರಫೀಕ್ ಬಿ.(40) ಎಂದು ಗುರುತಿಸಲಾಗಿದೆ. ಆರೋಪಿಯು ತಲಪಾಡಿ ಗ್ರಾಮದ ಕೆ. ಸಿ. ರೋಡ್ ಪರಿಸರದಲ್ಲಿ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದಾಘ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆತನಿಂದ 2,50,000 ರೂ. ಮೌಲ್ಯದ 50 ಗ್ರಾಂ ಎಂಡಿಎಂಎ ಮಾದಕ ವಸ್ತು, 8,000 ರೂ. ನಗದು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,68,500/-ರೂ ಎಂದು ಅಂದಾಜಿಸಲಾಗಿದೆ.

ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. ಸಿಸಿಬಿ ಕಾರ್ಯಾಚರಣೆಯಲ್ಲಿ ಎಸಿಪಿ ಪಿ. ಎ. ಹೆಗಡೆ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್. ಎಂ., ಪಿಎಸ್ಐ ರಾಜೇಂದ್ರ ಬಿ., ಸುದೀಪ್ ಎಂ. ವಿ., ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಾದಕ ವಸ್ತು ಮಾರಾಟ ಮಾಡುವವರ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

See also  ಹೆಬ್ಬಾಳ್ಕರ್‌ ಬೆನ್ನುಹುರಿಗೆ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದ ವೈದ್ಯರು, ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget