ನ್ಯೂಸ್ ನಾಟೌಟ್: ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಧಾರಾಕಾರ ಮಳೆಯಿಂದ ಸೋಮವಾರ ಮತ್ತು ಮಂಗಳವಾರ (ಜು. 24 ಮತ್ತು 25ರಂದು) ರಜೆ ಘೋಷಿಸಲಾಗಿತ್ತು. ಇದೀಗ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರ ಕೂಡ ರಜೆ ಘೋಷಿಸಲಾಗಿದೆ.