ಕರಾವಳಿಕ್ರೈಂಸುಳ್ಯ

ಕಡಬ:B.Sc ನರ್ಸಿಂಗ್ ವಿದ್ಯಾರ್ಥಿನಿ ಹಠಾತ್ ಕುಸಿದು ಬಿದ್ದು ಮೃತ್ಯು, ಮುದ್ದಿನ ಮಗಳನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಪೋಷಕರ ರೋಧನ

ನ್ಯೂಸ್ ನಾಟೌಟ್ :ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ.ರೆಂಜಿಲಾಡಿಯ ನಿಡ್ಮೇರು‌ ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ‌ (18) ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಈಕೆ ಮಂಗಳೂರಿನ ಲಕ್ಷ್ಮಿ ಮೆಮೋರಿಯಲ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದ್ದು,ಮೃತ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು.ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಯಾವುದೇ ಸಮಸ್ಯೆ ಕಂಡು ಬರಲಿಲ್ಲವೆಂದು ತಿಳಿದು ಬಂದಿದೆ.

ಆರೋಗ್ಯದಿಂದಿದ್ದ ರಶ್ಮಿತಾ ನಿನ್ನೆ ರಾತ್ರಿ 10.30 ಕ್ಕೆ ಹಠಾತ್ ಕುಸಿದು ಬಿದ್ದಿದ್ದಾರೆ.ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಪ್ರಾಣವನ್ನೂ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ರಶ್ಮಿತಾ ಸಾವಿನ ಹಿನ್ನೆಲೆ ಕಾಲೇಜಿನ‌ಲ್ಲಿ ರಶ್ಮಿತಾ ಬ್ಯಾಚ್ ನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.ಅಲ್ಲದೇ ಮಗಳನ್ನು ಕಳೆದುಕೊಂಡ ಪೋಷಕರ ರೋಧನ ಮುಗಿಲು‌ ಮುಟ್ಟಿದೆ.

Related posts

ಖ್ಯಾತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್..! 2,237 ಕೋಟಿ ರೂ. ಲಂಚದ ಆರೋಪ..!

3 ದಿನಗಳ ಕಾಲ ಕರ್ನಾಟಕದಲ್ಲಿ ಮದ್ಯ ನಿಷೇಧ..! ಇಲ್ಲಿದೆ ಸಂಪೂರ್ಣ ಮಾಹಿತಿ

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..! ಭಟ್ಕಳದ ನಿವಾಸದಿಂದಲೇ ಆರೋಪಿಯ ಬಂಧನ..!