ಕಾಸರಗೋಡುಕ್ರೈಂಪುತ್ತೂರುಮಂಗಳೂರುವೈರಲ್ ನ್ಯೂಸ್

ಮಂಗಳೂರು: ಸಾಲ ಮರುಪಾವತಿ ಮಾಡಲು ಯೂಟ್ಯೂಬ್ ನೋಡಿ ನಕಲಿ ಕರೆನ್ಸಿ ನೋಟ್ ಪ್ರಿಂಟ್..! ಪುತ್ತೂರಿನ ಓರ್ವ ಸೇರಿ ನಾಲ್ವರ ಬಂಧನ..!

ನ್ಯೂಸ್ ನಾಟೌಟ್: ನಕಲಿ ನೋಟು ಮುದ್ರಿಸುತ್ತಿದ್ದ ಆರೋಪದ ಮೇಲೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಾಲ್ವರನ್ನು ಬಂಧಿಸಿರುವ ಮಂಗಳೂರು ಪೊಲೀಸರು, 500 ರೂಪಾಯಿ ಮುಖಬೆಲೆಯ 2,13,500 ರೂಪಾಯಿ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್​ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.

ಕಾಸರಗೋಡಿನ ಚೆರ್ಕಳದಲ್ಲಿ ಪ್ರಿಂಟಿಂಗ್ ಪ್ರೆಸ್ ಹೊಂದಿರುವ ಪ್ರಮುಖ ಆರೋಪಿ ಪ್ರಿಯೇಶ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಸಾಲ ಮರುಪಾವತಿಸಲು ನಕಲಿ ನೋಟು ಮುದ್ರಣಕ್ಕೆ ಮುಂದಾಗಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ಕೋಝಿಕ್ಕೋಡ್ ಮತ್ತು ದೆಹಲಿಯಿಂದ ಆನ್‌ಲೈನ್‌ನಲ್ಲಿ ಕಚ್ಚಾ ವಸ್ತುಗಳನ್ನು ಖರೀದಿಸಿದ್ದರು. ಯೂಟ್ಯೂಬ್ ಮೂಲಕ ನಕಲಿ ಕರೆನ್ಸಿ ಮುದ್ರಿಸುವುದನ್ನು ಕಲಿತರು. ಈತ ಕಳೆದ ಮೂರು ತಿಂಗಳಿಂದ ಚೆರ್ಕಳದಲ್ಲಿರುವ ತನ್ನ ಪ್ರಿಂಟಿಂಗ್ ಪ್ರೆಸ್​​ನಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ.

ಆರೋಪಿಗಳು ಉತ್ತಮ ಗುಣಮಟ್ಟದ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು (ಎಫ್‌ಐಸಿಎನ್) ಪ್ರಿಂಟ್ ಮಾಡಿದ್ದು, ಇದು ನಕಲಿ ಎಂದು ಕಂಡುಹಿಡಿಯುವುದು ಸಾಮಾನ್ಯ ಜನರಿಗೆ ಕಷ್ಟಕರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 25 ಸಾವಿರ ನಗದು ನೀಡಿ 1 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಪೊಲೀಸರು ಲಾಡ್ಜ್‌ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

Click

https://newsnotout.com/2024/08/bengaluru-lady-case-under-twist-kannada-news-fir/

Related posts

ಇಸ್ರೇಲ್-ಫೆಲೆಸ್ತೀನ್ ಯುದ್ಧದಲ್ಲಿ 21 ಪತ್ರಕರ್ತರು ಮೃತ್ಯು..? ಎಲ್ಲೆಲ್ಲಿಯ ಪತ್ರಕರ್ತರು ಸೇರಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ

ದರ್ಶನ್ ಪ್ರಕರಣ: ದೇವರಂತಹ ಮನುಷ್ಯ, ನಾಯಿಯಂತಹ ಬುದ್ಧಿ ಎಂದ ತಗಡು ವಿವಾದದ ಉಮಾಪತಿ..! ದರ್ಶನ್ ನನ್ನ ಸೆಟ್‌ ನಲ್ಲೂ ಯಾರಿಗೋ ಎರಡು-ಮೂರು ಸಲ ಹೊಡೆದಿದ್ದರು ಎಂದ ನಿರ್ಮಾಪಕ..!

ಕಾಲಭೈರವನ ಪ್ರತಿಮೆಯ ಬಾಯಿಗೆ ಸಿಗರೇಟ್ ಇಟ್ಟು ವಿಡಿಯೋ ಮಾಡಿದ ಯುವಕ..! ತನಿಖೆ ಆರಂಭಿಸಿದ ಪೊಲೀಸರು