ಕ್ರೈಂ

ತಾನು ಐಪಿಎಸ್ ಎಂದು ಕೋಟ್ಯಾಂತರ ರೂ ಜೊತೆಗೆ ಯುವತಿಗೂ ವಂಚನೆ! ಈತನ ಪ್ಲಾನ್ ಕೇಳಿ ಅಸಲಿ ಐಪಿಎಸ್ ಅಧಿಕಾರಿಗಳೇ ಶಾಕ್!

330

ನ್ಯೂಸ್‌ನಾಟೌಟ್‌:  ಐಷಾರಾಮಿ ಜೀವನಕ್ಕಾಗಿ ಪೊಲೀಸ್‌ ಅಧಿಕಾರಿ ಸೋಗಿನಲ್ಲಿ ಸಾರ್ವಜನಿಕರಿಗೆ ವಂಚಿಸಿದ ಪ್ರಕರಣ ದಲ್ಲಿ ಮಾರ್ಚ್ 18ರಂದು ಬಂಧನಕ್ಕೊಳಗಾಗಿದ್ದ ನಕಲಿ ಐಪಿಎಸ್‌ ಅಧಿಕಾರಿ ಶ್ರೀನಿವಾಸ್‌ ಎಂಬಾತ ಎಂದುತಲಘಟ್ಟ ಪುರ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಭಾರತೀಯ ರೈಲ್ವೆ ಅಧಿಕಾರಿ, ವೈದ್ಯ, ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿ, ಕೇಂದ್ರ ಗುಪ್ತಚರ ವಿಭಾಗದ ಅಧಿಕಾರಿ ಎಂದು ಸಾರ್ವಜನಿಕರಿಗೆ ಅನೇಕ ಇಲಾಖೆಗಳ ಹೆಸರಲ್ಲಿ ವಂಚಿಸಿರುವುದು ತಿಳಿದುಬಂದಿದ್ದು, ಸಾರ್ವಜನಿಕರಿಗೆ ವಂಚಿಸಿದ ಕೋಟ್ಯಂತರ ರೂ.ನಲ್ಲಿ 54 ಲಕ್ಷ ರೂ. ಮೌಲ್ಯದ 21 ಐಫೋನ್‌, ಇನೋವಾ ಕಾರು, ಬಿಎಂಡ್ಲ್ಯೂ ಬೈಕ್‌, ಟ್ರಯಂಫ್ ಟೈಗರ್‌ ಎಕ್ಸ್‌ಆರ್‌ಎಕ್ಸ್‌ ಬೈಕ್‌, ಎಕ್ಸ್‌-ಪಲ್ಸ್‌ ಬೈಕ್‌, ರಾಯಲ್‌ ಎನ್‌ಫೀಲ್ಡ್‌ ಇವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜೊತೆಗೆ ಆತನ ಬಲಿ ಇದ್ದ 36.20 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜತೆಗೆ ಆ್ಯಪಲ್‌ ಕಂಪನಿಯ ಲ್ಯಾಪ್‌ಟಾಪ್‌, ಒಂದು ಡಮ್ಮಿ ಪಿಸ್ತೂಲ್‌, 2 ವಾಕಿಟಾಕಿಗಳು, ನಕಲಿ ಗುರುತಿನ ಚೀಟಿಗಳನ್ನು ಜಪ್ತಿ ಮಾಡಲಾಗಿದೆ ಎಮದು ವರದಿ ತಿಳಿಸಿದೆ.

ಚಂದ್ರಲೇಔಟ್‌ ನಿವಾಸಿ ಎಂ.ರಾಜು ಎಂಬುವರು ಶ್ರೀನಿವಾಸ್‌ನನ್ನು ಆಸ್ಪತ್ರೆಯಿಂದ ತಂದು ದತ್ತು ಮಗನಾಗಿ ಸಾಕಿದ್ದಾರೆ. ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಕಾಲೇಜಿನಲ್ಲಿ ಡಿಪ್ಲೊಮಾ ಇನ್‌ ಕಂಪ್ಯೂಟರ್‌ ಸೈನ್ಸ್‌ಗೆ ಸೇರಿಸಿದ್ದಾಗ ಅರ್ಧಕ್ಕೆ ಓದು ನಿಲ್ಲಿಸಿದ್ದಾನೆ. ಇದೇ ವೇಳೆ ಐಷಾರಾಮಿ ಜೀವನಕ್ಕಾಗಿ 2010ರಲ್ಲಿ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ 2 ಕಾರು ಕದ್ದಿದ್ದನು. ಅದರಲ್ಲಿ ಜೈಲಿಗೂ ಹೋಗಿ ಬಂದಿದ್ದನು.

ನಂತರ ಮುಕ್ತ ವಿವಿಯಲ್ಲಿ ಬಿಸಿಎ ವ್ಯಾಸಂಗ ಮಾಡಿ, ಬನ್ನೇರುಘಟ್ಟ, ಬೇಗೂರು ಕೊಪ್ಪ, ಹುಲ್ಲಹಳ್ಳಿಯಲ್ಲಿರುವ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಗ್ರಾಫಿಕ್‌ ಡಿಸೈನರ್‌ ಆಗಿದ್ದ. ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ರಮ್ಯಾ ಎಂಬಾಕೆಯನ್ನು ಪರಿಚಯಿಸಿಕೊಂಡಿದ್ದಾನೆ. ಕೆಲ ದಿನಗಳ ಬಳಿಕ “ತಾನು ಐಪಿಎಸ್‌ ತೇರ್ಗಡೆ ಆಗಿದ್ದೇನೆ. ನಿನ್ನನ್ನೇ ಮದುವೆ ಆಗುತ್ತೇನೆ’ ಎಂದು ಆಕೆ ಜತೆಗೆ ಗೋವಾ, ಚೆನ್ನೈ, ಹೈದರಾಬಾದ್‌ ಮತ್ತಿತರ ಕಡೆ ಕರೆದೊಯ್ದು ಸುತ್ತಾಡಿ ವಂಚಿಸಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮೊದಲಿಗೆ “ನಾನು ಸಬ್‌ಇನ್‌ಸ್ಪೆಕ್ಟರ್‌ ಆಗಿದ್ದು, ಐಬಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ನಂಬಿಸಿದ್ದಾನೆ. ಬಳಿಕ ಐಪಿಎಸ್‌ ಪರೀಕ್ಷೆಯಲ್ಲಿ 7ನೇ ರ್‍ಯಾಂಕ್‌ ಪಡೆದು ಉತ್ತೀರ್ಣನಾಗಿದ್ದೇನೆ’ ಎಂದು ನಂಬಿಸಿದ್ದಾನೆ. ಅಲ್ಲದೆ, ಅದಕ್ಕೆ ಪೂರಕವಾಗಿ ನಕಲಿ ಗುರುತಿನ ಚೀಟಿ, ಪೊಲೀಸ್‌ ಅಧಿಕಾರಿಯ ಸಮವಸ್ತ್ರ ಧರಿಸಿ, ಇನೋವಾ ಕಾರಿಗೆ ಪೊಲೀಸ್‌ ವಾಹನಗಳ ಮೇಲೆ ಅಳವಡಿಸಿರುವ ಟಾಪ್‌ಲೈಟ್‌ ಹಾಕಿಕೊಂಡಿದ್ದಾನೆ. ಡಮ್ಮಿ ಪಿಸ್ತೂಲ್‌, ವಾಕಿಟಾಕಿಗಳನ್ನು ಖಾಸಗಿಯಾಗಿ ಖರೀದಿಸಿ, ಅಸಲಿ ಎಂದು ನಂಬಿಸಿದ್ದಾನೆ. ಸಾರ್ವಜನಿಕರಿಗೆ ಲ್ಯಾಂಡ್‌ ಡಿಲೀಂಗ್‌ ಹೆಸರಲ್ಲಿ ಕೋಟ್ಯಂತರ ರೂ. ಪಡೆದು ವಂಚಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

See also  ವೈದ್ಯೆಯ ಹತ್ಯೆ ಮತ್ತು ಅತ್ಯಾಚಾರ ಕೇಸ್ ಗೆ ಟ್ವಿಸ್ಟ್..! ಪ್ರಾಥಮಿಕ ತನಿಖೆ ನಡೆಸಿದ್ದ ಠಾಣಾಧಿಕಾರಿಯೇ ಅರೆಸ್ಟ್..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget