ನ್ಯೂಸ್ ನಾಟೌಟ್ :ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ ಮೋಹನ್ ರೆಡ್ಡಿ (Jagan Mohan Reddy) ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಪಲ್ನಾಡು ಜಿಲ್ಲೆಗೆ ಭೇಟಿ ನೀಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಜಗನ್ ತಮ್ಮ ಬೆಂಗಾವಲು ಪಡೆಯೊಂದಿಗೆ ಬರುತ್ತಿದ್ದಾಗ ಅವರ ಕಾರನ್ನು ಅಭಿಮಾನಿಗಳು ತಡೆದಿದ್ದು ಈ ವೇಳೆ ಓರ್ವ ವ್ಯಕ್ತಿ ಜಗನ್ ಇದ್ದ ಕಾರಿನ ಕೆಳಗೆ ಬಿದ್ದಿದ್ದಾನೆ. ಇದನ್ನು ಗಮನಿಸದ ಜಗನ್ ಕಾರು ಚಾಲಕ ಕಾರನ್ನು ಮುಂದಕ್ಕೆ ಚಲಾಯಿಸಿದ್ದು, ಈ ವೇಳೆ ಕಾರಿನ ಚಕ್ರ ವ್ಯಕ್ತಿಯ ಕುತ್ತಿಗೆ ಮೇಲೆ ಹರಿದಿದೆ. ಈ ವೇಳೆ ಜನ ಕೂಗಿದಾಗ ಚಾಲಕ ಕಾರು ನಿಲ್ಲಿಸಿದ್ದಾರೆ.
[🚨Trigger warning]
Get born. Spend your life worshipping a hero. Defend every mistake like it’s your own, cheer louder as things get worse. Then ironically die under your hero’s car only. Some compensation, no accountability. Sad end.
(Jagan Reddy’s roadshow in Guntur.) pic.twitter.com/hpCPNuvnJB
— THE SKIN DOCTOR (@theskindoctor13) June 22, 2025
ಕೂಡಲೇ ಜನರು ಗಂಭೀರವಾಗಿ ಗಾಯಗೊಂಡ ಆ ವ್ಯಕ್ತಿಯನ್ನು ಸ್ಥಳೀಯರು ಗುಂಟೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ವೈಎಸ್ ಆರ್ ಪಿ ಕಾಂಗ್ರೆಸ್ ಕಾರ್ಯಕರ್ತ ಚೀಲಿ ಸಿಂಘಯ್ಯ ಎಂದು ತಿಳಿದುಬಂದಿದೆ.