ಬೆಂಗಳೂರುರಾಜಕೀಯಸುಳ್ಯ

ಡಿವಿ ಸದಾನಂದ ಗೌಡ ನಡೆ ಇನ್ನೂ ನಿಗೂಢ, ಸುಳ್ಯಕ್ಕೆ ತೆರಳಿದ ಗೌಡ್ರು ಹೊಸ ಶಾಕ್ ನೀಡುವರೇ..?

251

ನ್ಯೂಸ್ ನಾಟೌಟ್: ಮಾಜಿ ಮುಖ್ಯಮಂತ್ರಿ, ಸಂಸದ ಡಿವಿ ಸದಾನಂದ ಗೌಡರ ರಾಜಕೀಯ ನಡೆ ಇನ್ನೂ ನಿಗೂಢವಾಗಿದೆ. ಸದ್ಯ ಅವರು ಬೆಂಗಳೂರಿನಿಂದ ತಮ್ಮ ತವರು ನೆಲ ಸುಳ್ಯಕ್ಕೆ ಪ್ರಯಾಣಿಸಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದ ಗೌಡ ಇಂದು ಬೆಳಗ್ಗೆಯೇ ಸುಳ್ಯದತ್ತ ಪ್ರಯಾಣಿಸಿದ್ದ ಕುಟುಂಬಸ್ಥರು, ಸಂಬಂಧಿಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ಮಾ.8 ರಂದು ಹುಟ್ಟುಹಬ್ಬ ಆಚರಿಸಿದ್ದ ವೇಳೆ ನಾನು ನಾಳೆ ಸುದ್ದಿಗೋಷ್ಠಿ ನಡೆಸಿ ಮುಂದಿನ ನಡೆಯ ಬಗ್ಗೆ ಹೇಳುತ್ತೇನೆ ಎಂದು ತಿಳಿಸಿದ್ದರು. ಆದರೆ ಅವರು ಸುದ್ದಿಗೋಷ್ಠಿ ನಡೆಸಿರಲಿಲ್ಲ. ‌ ಹೀಗಾಗಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿತ್ತು. ಸದಾನಂದ ಗೌಡ ಗುರುವಾರ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿಗೆ ಬಂದ ನಂತರ ಮುಂದಿನ ರಾಜಕೀಯ ನಡೆಯ ಬಗ್ಗೆ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

See also  ಹಠಾತ್ ಕೊನೆಯುಸಿರೆಳೆದ ಯುವ ಆಟೋ ಚಾಲಕ ,ಸಂಪಾಜೆಯ ವ್ಯಕ್ತಿಗೆ ಆಗಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget