ದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ..! ಈ ಬಗ್ಗೆ ಕೇಂದ್ರ ಸಚಿವ ಹೇಳಿದ್ದೇನು..?

170

ನ್ಯೂಸ್ ನಾಟೌಟ್: ಲೋಕಸಭಾ ಚುನಾವಣಾ ರ‍್ಯಾಲಿ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದ ಘಟನೆ ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಮಂಗಳವಾರ(ಎ.23) ಮಧ್ಯಾಹ್ನ ಶಿವಸೇನೆಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಪ್ರಜ್ಞೆ ತಪ್ಪಿದ್ದಾರೆ. ಗಡ್ಕರಿ ಬಿಜೆಪಿಯ ನಾಗ್ಪುರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸಿದ್ದರು.

ಪ್ರಜ್ಞೆ ತಪ್ಪಿದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಿತಿನ್‌ ಗಡ್ಕರಿ, ಮಹಾರಾಷ್ಟ್ರದ ಪುಸಾದ್‌ನಲ್ಲಿ ನಡೆದ ರ‍್ಯಾಲಿ ವೇಳೆ ಬಿಸಿಲಿನ ತಾಪದಿಂದ ಅನಾನುಕೂಲವಾಗಿತ್ತು. ಆದರೆ ಈಗ ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಮುಂದಿನ ಸಭೆಗೆ ಹಾಜರಾಗಲು ವರುದ್‌ಗೆ ಹೊರಡುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

See also  ಯುವರಾಜ್ ಕುಮಾರ್ ಸಲ್ಲಿಸಿದ್ದ ಡಿವೋರ್ಸ್‌ ಕೇಸ್‌ ಮುಂದೂಡಿಕೆ..! ಪತ್ನಿ ಶ್ರೀದೇವಿ ಭೈರಪ್ಪರಿಂದ ಆಕ್ಷೇಪ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget