ಕರಾವಳಿಕ್ರೈಂಮಂಗಳೂರುವೈರಲ್ ನ್ಯೂಸ್

ಬೆಳ್ತಂಗಡಿ: ವಿದ್ಯುತ್ ಶಾಕ್ ತಗುಲಿ 14ರ ವಿದ್ಯಾರ್ಥಿ ಸಾವು..! ಮನೆಯಲ್ಲಿ ಕ್ರಿಸ್ ಮಸ್ ದೀಪಗಳ ಅಲಂಕಾರದ ವೇಳೆ ದುರ್ಘಟನೆ..!

ನ್ಯೂಸ್ ನಾಟೌಟ್: ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ಘಟನೆ‌ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಪೆರೊಡಿತ್ತಾಯನ ಕಟ್ಟೆ ಬಳಿ ಗುರುವಾರ(ಡಿ.19) ಬೆಳಗ್ಗೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಸ್ಟೀಪನ್ (14) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿ ವಿದ್ಯಾರ್ಥಿಯಾಗಿದ್ದ.

ಕ್ರಿಸ್ ಮಸ್ ಪ್ರಯುಕ್ತ ಮನೆಗೆ ಆಲಂಕಾರ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಬಂದರೂ ಅಷ್ಟೊತ್ತಿಗಾಗಲೇ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತ ವಿದ್ಯಾರ್ಥಿಯ ತಂದೆ ಹಾಗೂ ತಾಯಿ ಕೆಲವು ವರ್ಷಗಳ ಹಿಂದೆ ಮೃತ ಪಟ್ಟಿದ್ದರು. ಈತ ಅಜ್ಜಿ ಮನೆಯಲ್ಲಿದ್ದು ಶಿಕ್ಷಣ ಪಡೆಯುತ್ತಿದ್ದ. ಇಂದು ಶಾಲೆಗೆ ರಜೆ ಮಾಡಿ ಮನೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರ ಮಾಡುತ್ತಿದ್ದ ಎನ್ನಲಾಗಿದೆ.

Click

https://newsnotout.com/2024/12/electricity-bill-kannada-news-viral-news-govt-to-siddagangha-matta/
https://newsnotout.com/2024/12/kannada-news-women-run-to-hospital-women-hd/
https://newsnotout.com/2024/12/couple-case-in-crow-issue-viral-news-tamilnadu-h/
https://newsnotout.com/2024/12/boat-collition-navy-coastal-guard-viral-news/
https://newsnotout.com/2024/12/bjp-politician-and-rahulgandi-confict-on-protest/

Related posts

ಹಿಮಪಾತಕ್ಕೆ ಸಿಲುಕಿ ಮೂವರು ಯೋಧರು ಬಲಿ

ಬಿ.ಎಲ್ ಸಂತೋ‍ಷ್ ಇರುವವರೆಗೂ ಬಿಜೆಪಿಗೆ ಸೋಲು ನಿಶ್ಚಿತ.. ಕಿಡಿಕಾರಿದ ರೇಣುಕಾಚಾರ್ಯ ಬೆಂಬಲಿಗರು

ದಬಕ್ ದಬಾ ಐಸಾ..! ರಸ್ತೆ ಮಧ್ಯೆ ಕೆಟ್ಟು ನಿಂತ ಓಮ್ನಿ ಕಾರನ್ನು ತಳ್ಳಿದ ಶಾಸಕ ಅಶೋಕ್ ರೈ