ಚಿಕ್ಕಮಗಳೂರುರಾಜ್ಯವೈರಲ್ ನ್ಯೂಸ್

ಕಾಡಾನೆಗಳ ಭೀತಿ, ಶಾಲಾ‌-ಕಾಲೇಜುಗಳಿಗೆ ರಜೆ ಘೋಷಣೆ..! 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ..!

ನ್ಯೂಸ್ ನಾಟೌಟ್: ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಡಳಿತ ಭಾನುವಾರ(ನ.11) ಆದೇಶ ಹೊರಡಿಸಿತ್ತು. ಇದೀಗ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಸಂಭಾವ್ಯ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ವಸ್ತಾರೆ, ಮೂಗ್ತಿಹಳ್ಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಹೀಗಾಗಿ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 2 ಗ್ರಾಮ ಪಂಚಾಯಿತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಗ್ರಾಮಗಳಲ್ಲಿ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಡಾನೆಗಳ ಹಾವಳಿಗೆ ಕಾಫಿ, ಮೆಣಸು, ಬಾಳೆ ಬೆಳೆ ಸಂಪೂರ್ಣ ನಾಶವಾಗುತ್ತಿವೆ. ಸದ್ಯ ಮಾರಿಕಟ್ಟೆ ಗ್ರಾಮದ ಕಾಫಿತೋಟದಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ.
ಮುಂಜಾಗ್ರತಾ ಕ್ರಮವಾಗಿ 10-11-20240 ರ ಸಂಜೆ 7 ಗಂಟೆಯಿಂದ 11-11-2024 ರ ರಾತ್ರಿ 9 ಗಂಟೆ ವರೆಗೆ ಕಾಡಾನೆ ಇರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಕಾರ್ಯಾಚರಣೆಗೆ ತೊಂದರೆ ಉಂಟಾಗದಂತೆ ಸಹಕರಿಸಬೇಕಾಗಿ ತಿಳಿಸಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಶಾಲಾ ಕಾಲೇಜು ಸಿಬ್ಬಂದಿ ಓಡಾಡುವುದನ್ನು ನಿಷೇಧಿಸಲಾಗಿದೆ.

Click

https://newsnotout.com/2024/11/gps-kannada-news-eagle-viral-news-karavara-case/
https://newsnotout.com/2024/11/ksrtc-kananda-news-google-pay-phone-pay-viral-news/

Related posts

ಭಾರತದ ಮೊಟ್ಟ ಮೊದಲ ಎಲೆಕ್ಟ್ರಿಕ್ ಟಿಪ್ಪರ್ ! ಏನಿದರ ವಿಶೇಷತೆ ?

ಜೆಡಿಎಸ್‌ ಕಚೇರಿ ಗೋಡೆಯಲ್ಲಿ ವಿದ್ಯುತ್‌ ಕಳ್ಳ ಕುಮಾರಸ್ವಾಮಿ ಪೋಸ್ಟರ್‌ ಹಾಕಿದ್ಯಾರು? ಬೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಹೇಳಿದ್ದೇನು?

ದಕ್ಷಿಣ ಕನ್ನಡದಲ್ಲಿ ಡೆಂಗ್ಯೂಗೆ ವ್ಯಕ್ತಿ ಬಲಿ..! ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದೇನು..?