Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಉದ್ಯೋಗ ಅರಸಿ ಮಯನ್ಮಾರ್‌ ಗೆ ತೆರಳಿ ವಂಚನೆಗೆ ಒಳಗಾಗಿದ್ದ 28 ಕನ್ನಡಿಗರು..! ರಕ್ಷಣೆ ಮಾಡಿ ಕರೆತಂದ ವಿದೇಶಾಂಗ ಸಚಿವಾಲಯ..!

780
Spread the love

ನ್ಯೂಸ್ ನಾಟೌಟ್: ಉದ್ಯೋಗ ಅರಸಿ ವಿದೇಶಕ್ಕೆ ತೆರಳಿ ವಂಚನೆಗೆ ಒಳಗಾಗಿದ್ದ ನಾಲ್ವರು ಮಹಿಳೆಯರು ಸೇರಿ 28 ಮಂದಿ ಕನ್ನಡಿಗರನ್ನು ವಿದೇಶಾಂಗ ಸಚಿವಾಲಯ ರಕ್ಷಣೆ ಮಾಡಿದೆ. ರಕ್ಷಣೆಗೊಳಗಾದವರನ್ನು ದೆಹಲಿಯ ಕರ್ನಾಟಕ ಭವನದ ಅಧಿಕಾರಗಳ ನೆರವಿನೊಂದಿಗೆ ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ‌.

ಸೋಶಿಯಲ್ ಮೀಡಿಯಾ ಮೂಲಕ ಉದ್ಯೋಗ ನೀಡುವ ಭರವಸೆ ನೀಡಿ 283 ಭಾರತೀಯರನ್ನು ಥೈಲ್ಯಾಂಡ್‌ ಗೆ ಕರೆಸಿಕೊಳ್ಳಲಾಗಿತ್ತು. ಥೈಲ್ಯಾಂಡ್‌ ಗೆ ತೆರಳಿದ್ದ ಭಾರತೀಯರನ್ನ ರಸ್ತೆ ಮಾರ್ಗದ ಮೂಲಕ ಮಯನ್ಮಾರ್‌ ಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಪಾಸ್‌ಪೊರ್ಟ್ ಕಿತ್ತುಕೊಂಡು ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು.

ಒತ್ತೆಯಾಳಾಗಿಟ್ಟುಕೊಂಡಿದ್ದ ಭಾರತೀಯರನ್ನು ದಿನಕ್ಕೆ 15 ಗಂಟೆಗೂ ಅಧಿಕ ಕೆಲಸ ಮಾಡಿಸಲಾಗುತ್ತಿತ್ತು. ಈ ವಿಷಯ ವಿದೇಶಾಂಗ ಸಚಿವಾಲಯ ಗಮನಕ್ಕೆ ಬಂದ ಬಳಿಕ ವಂಚನೆಗೊಳಾದವರನ್ನು ಗುರುತಿಸಿ ಮಯನ್ಮಾರ್, ಥೈಲ್ಯಾಂಡ್ ರಾಯಭಾರ ಕಚೇರಿಗಳ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಯಿತು‌.

ಭಾರತಕ್ಕೆ ಬಂದ 28 ಕನ್ನಡಿಗರನ್ನು ಕರ್ನಾಟಕ ಭವನದ ಅಧಿಕಾರಿಗಳು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಕಳುಹಿಸಲಾಯಿತು.

See also  ಪಾತ್ರೆಯೊಳಗೆ ತಲೆ ಸಿಲುಕಿ ಪರದಾಡಿದ 4 ವರ್ಷದ ಬಾಲಕ! ಬಾಲಕನಿಗೆ ಮೊಬೈಲ್ ಕೊಟ್ಟು ಪೊಲೀಸರು ಆತನನ್ನು ರಕ್ಷಿಸಿದ್ದೇಗೆ? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget