ನ್ಯೂಸ್ ನಾಟೌಟ್: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕಾಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ವಿವಿಧ ಉದ್ಯೋಗವಕಾಶ ಇಲ್ಲಿದ್ದು, ಜ.9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.ಭಾರತೀಯ ಅಂಚೆ ಇಲಾಖೆಯು ಮೆಕ್ಯಾನಿಕ್, MV ಎಲೆಕ್ಟ್ರಿಷಿಯನ್, ಕಾಪರ್ ಮತ್ತು ಟಿನ್ಮಿತ್ ಮತ್ತು ಅಪ್ಹೋಲ್ ಸ್ಟರರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ:
• MV ಮೆಕ್ಯಾನಿಕ್- 4 ಹುದ್ದೆ
• MV ಎಲೆಕ್ಟ್ರಿಷಿಯನ್-– 1 ಹುದ್ದೆ
• ಕಾಪರ್ ಮತ್ತು ಟಿನ್ಮಿತ್- 1 ಹುದ್ದೆ
• ಅಪ್ಹೋಲ್ಸ್ಟರರ್- 1 ಹುದ್ದೆ
ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪ್ರಮಾಣಪತ್ರ ಹೊಂದಿರಬೇಕು. ಇದಲ್ಲದೆ, ಮಾನ್ಯವಾದ ಚಾಲನಾ ಪರವಾನಗಿ (HMV) ಸಹ ಇರಬೇಕಾಗುತ್ತದೆ.
ವಯೋಮಿತಿ:
ಈ ಹುದ್ದೆಗಳಿಗೆ 18 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ರೂ. 19900 ರಿಂದ ರೂ. 63200 ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 9, 2023
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ನ ಅಧಿಕೃತ ವೆಬ್ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.