ರಾಜ್ಯವೈರಲ್ ನ್ಯೂಸ್ಸಿನಿಮಾ

ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ನಟ ಡಾಲಿ ಧನಂಜಯ್, ಬಾಳ ಸಂಗಾತಿ ‘ಡಾಕ್ಟರ್’

218

ನ್ಯೂಸ್‌ ನಾಟೌಟ್‌: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ ಮತ್ತು ವೈದ್ಯೆಯಾಗಿರುವ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17) ನಡೆಯಿತು.
ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ ಎಂದು ವರದಿ ತಿಳಿಸಿದೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು.

ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿಯೇ ಎನ್ನಲಾಗಿದೆ.

Click

https://newsnotout.com/2024/11/sslc-man-issue-godess-statue-kananda-news-viral-news-f/
https://newsnotout.com/2024/11/isrel-pm-benjamin-netanyahu-kannada-news-viral-news-d/
See also  ಮಗಳು ಕಪ್ಪಗಿದ್ದಾಳೆ ಎಂದು ವಿಷ ಕುಡಿಸಿದ ತಂದೆ..!18 ತಿಂಗಳ ಮಗುವನ್ನು ಕೊಂದ ಕ್ರೂರಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget